ಕಲಬುರಗಿ: ಮಹಾನಗರ ಪಾಲಿಕೆಯ 55 ವಾರ್ಡ್‍ಗಳಿಗೆ 2021ರ ಸೆಪ್ಟಂಬರ್ 3 ರಂದು ಚುನಾವಣೆ ನಡೆಯಲಿದ್ದು, ಇಂದು ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಹಾನಗರ ಪಾಲಿಕೆ ಚುನಾವಣಾ ಉಸ್ತುವಾರಿ ಎನ್.ರವಿಕುಮಾರ್ ಭಾರತಿಯ ಜನತಾ ಪಕ್ಷದ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿತ್ತು. ಇದೀಗ ಬಿಜೆಪಿ ನಾಯಕರು ಅಳೆದು, ತೂಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಬಿಜೆಪಿಯ 52 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದು, ಇನ್ನೂ ಮೂವರ ಹೆಸರನ್ನು ಅಂತಿಮಗೊಳಿಸಿಲ್ಲ.