ಕಲಬುರಗಿ: ಪ್ರತಿಭಟನೆಗೆ ಅನುಮತಿ ಪಡೆಯದೆ ಸೈಕಲ್ ಜಾಥಾ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಬಿಜೆಪಿ ಮುಖಂಡೆ ದಿವ್ಯ ಹಾಗರಗಿ ಆಗ್ರಹಿಸಿ, ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ಅನುಮತಿ ಪಡೆಯದೆ ಸೈಕಲ್ ಜಾಥಾ: ಕೈ ನಾಯಕರ ವಿರುದ್ಧ ಕೇಸು ದಾಖಲಿಸಲು ಆಗ್ರಹ - ಬಿಜೆಪಿ ಮುಖಂಡೆ ದಿವ್ಯ ಹಾಗರಗಿ
ಪ್ರತಿಭಟನೆಗೆ ಅನುಮತಿ ಪಡೆಯದೆ ಕಲಬುರಗಿಯಲ್ಲಿ ಸೈಕಲ್ ಜಾಥಾ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಬಿಜೆಪಿ ನಾಯಕಿ ದಿವ್ಯ ಹಾಗರಗಿ ಆಗ್ರಹಿಸಿ, ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ನಿನ್ನೆ ಕಲಬುರಗಿಯಲ್ಲಿ ತೈಲ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಡೆಸಿದ ಸೈಕಲ್ ಜಾಥಾಕ್ಕೆ ಸರ್ಕಾರದಿಂದ ಅನುಮತಿ ಪಡೆದಿಲ್ಲ. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಮತ್ತಷ್ಟು ಕೊರೊನಾ ಪ್ರಕರಣಗಳು ಹೆಚ್ಚುವ ಆತಂಕ ಎದುರಾಗಿದೆ ಎಂದು ಆರೋಪಿಸಿದರು.
ಕೂಡಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸುವಂತೆ ಹಾಗೂ ಪ್ರತಿಭಟನೆ ತಡೆಯಲು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.