ಕಲಬುರಗಿ:ಜಿಲ್ಲೆಯಲ್ಲಿಮೊದಲ ಬಾರಿಗೆ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಾವು ಪೂರ್ಣ ರೀತಿಯ ಅಧಿಕಾರ ಹಿಡಿಯಲು ಪ್ರಯತ್ನ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಹಾನಗರ ಪಾಲಿಕೆಯಲ್ಲಿ ಅಧಿಕಾರ ರಚನೆಗೆ ಎಲ್ಲಾ ರೀತಿಯ ತಂತ್ರಗಾರಿಕೆ ಬಳಸಿ ಪೂರ್ಣ ರೀತಿಯ ಅಧಿಕಾರ ಹಿಡಿಯಲು ಪ್ರಯತ್ನ ನಡೆಸುತ್ತೇವೆ. ಕಾರ್ಯಕರ್ತರು ಭಾರತೀಯ ಜನತಾ ಪಾರ್ಟಿಯನ್ನು ಗೆಲ್ಲಿಸಿ ಅದ್ಬುತವಾದ ಕಾರ್ಯ ಮಾಡಿದ್ದಾರೆ. ಮತದಾರರು ಸಹ ಬಿಜೆಪಿಗೆ ಮತ ನೀಡಿ ಆಶೀರ್ವದಿಸಿದ್ದಾರೆ. ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಲಬುರಗಿ ಪಾಲಿಕೆಯಲ್ಲಿ ಅಧಿಕಾರ ರಚನೆಗೆ ತಂತ್ರಗಾರಿಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಮಾತನಾಡಿ, ಕಲಬುರಗಿ ಸೇರಿದಂತೆ ಮೂರು ಕಡೆ ನಮ್ಮವರೇ ಮೇಯರ್ ಆಗುತ್ತಾರೆ. ಮೂರು ಕಡೆ ಅಧಿಕಾರಕ್ಕೆ ಬರುವುದು ನಮ್ಮ ಪಕ್ಷದ ಸ್ಟ್ಯಾಟರ್ಜಿ. ಸದಸ್ಯರು, ಶಾಸಕರು, ಪರಿಷತ್ ಸದಸ್ಯರು ಸೇರಿದಂತೆ ಮೇಜಾರಿಟಿ ನಮ್ಮದಿದೆ. ಜನ ಉತ್ತಮ ಆಡಳಿತ ನೀಡಲು ಮತ ಹಾಕಿದ್ದಾರೆ. ಜೆಡಿಎಸ್ ಒಪ್ಪುತ್ತದೆ ಎಂಬ ವಿಶ್ವಾಸವಿದೆ. ಕಲಬುರಗಿ ಅಭಿವೃದ್ಧಿ ದೃಷ್ಟಿಯಿಂದ ನಾವು ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.
ಇನ್ನೊಂದೆಡೆ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ನಾವು ಈಗಾಗಲೇ ಫೈನಲ್ ಹಂತಕ್ಕೆ ಬಂದಿದ್ದು, ಇದರಲ್ಲಿ ಗೆಲ್ಲುತ್ತೇವೆ. ಸದ್ಯ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಯಾವುದೇ ಆಶ್ವಾಸನೆ ನೀಡಿಲ್ಲ. ಆದ್ರೆ ಯಾವುದೇ ಕಂಡೀಷನ್ ಇಲ್ಲದೇ ಬೆಂಬಲಿಸೋ ವಿಶ್ವಾಸವಿದೆ ಎಂದರು.