ಕಲಬುರಗಿ: ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ದೊರೆತಿದ್ದು, ಪತಿಯೇ ಕೊಲೆ ಮಾಡಿ ನೇಣು ಹಾಕಿರುವ ಆರೋಪ ಕೇಳಿ ಬಂದಿದೆ.
ನಗರದ ಪ್ರಗತಿ ಕಾಲೋನಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ಜ್ಯೋತಿ (22) ಎಂಬವರು ಶವವಾಗಿ ಪತ್ತೆಯಾಗಿದ್ದಾಳೆ. ಏಳು ತಿಂಗಳ ಹಿಂದಷ್ಟೇ ಲೋಕೇಶ್ ಎಂಬ ವ್ಯಕ್ತಿಯೊಂದಿಗೆ ಜ್ಯೋತಿ ವಿವಾಹವಾಗಿತ್ತು. ಲೋಕೇಶ್ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸೇಡಂ ಡಿಪೋದಲ್ಲಿ ಬಸ್ ಚಾಲಕನಾಗಿದ್ದಾನೆ. ಕಲಬುರಗಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಹಣಕ್ಕಾಗಿ ಲೋಕೇಶ್ ಪ್ರತಿದಿನ ಜ್ಯೋತಿಗೆ ಪೀಡಿಸುತ್ತಿದ್ದನಂತೆ. ಅಲ್ಲದೆ, ಮದುವೆ ಸಮಯದಲ್ಲಿ 120 ಗ್ರಾಂ ಚಿನ್ನ ಹಾಗೂ 5 ಲಕ್ಷ ರೂ.ಗಳನ್ನು ವರದಕ್ಷಿಣೆ ರೂಪದಲ್ಲಿ ನೀಡಿದ್ದರು ಎನ್ನಲಾಗಿದೆ. ಆದರೂ ಕೂಡ ಲೋಕೇಶ್ ಜ್ಯೋತಿಗೆ ತವರು ಮನೆಯಿಂದ ಹಣ ತರುವಂತೆ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಈ ಸಂಬಂಧ ಕಲಬುರಗಿ ಮಹಿಳಾ ಠಾಣೆಯಲ್ಲಿ ಪತಿ ಲೋಕೇಶ್ ಮತ್ತು ಆತನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಅರುಣಾಚಲದಲ್ಲಿ ಚೀನಾ ಗಡಿ ತಕರಾರು: ಹಿಮ್ಮೆಟ್ಟಿಸಿದ ಭಾರತೀಯ ಸೇನೆ