ಕರ್ನಾಟಕ

karnataka

ETV Bharat / state

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ - brutelly killed

ಕಲಬುರಗಿಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹಂತಕರಿಗಾಗಿ ಪೊಲೀಸರು ಬಲೆಬೀಸಿದ್ದಾರೆ.

ಯುವಕನ ಬರ್ಬರ ಕೊಲೆ

By

Published : Aug 8, 2019, 6:23 PM IST

ಕಲಬುರಗಿ:ಮಾರಕಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ, ನಗರದ ಆಶ್ರಯ ಕಾಲೋನಿಯಲ್ಲಿ ನಡೆದಿದೆ.

ರಫೀಕ್ ಖಾಸಿಂ(28) ಕೊಲೆಯಾದ ಯುವಕ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈತ ನಗರದ ಎಂಎಸ್​​ಕೆ ಮಿಲ್ ಹುಸೈನಿ ಗಾರ್ಡನ್ ನಿವಾಸಿ ಎಂದು ತಿಳಿದು ಬಂದಿದೆ. ರಫಿಕ್​​ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಸಂಬಂಧಿಕರಿಂದಲೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ABOUT THE AUTHOR

...view details