ಕರ್ನಾಟಕ

karnataka

ETV Bharat / state

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಬಿ.ಶರತ್ ಅಧಿಕಾರ ಸ್ವೀಕಾರ - B.Sharat

ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ‌.ಶರತ್ ಅವರನ್ನು ಸರ್ಕಾರವು ಇತ್ತೀಚೆಗೆ ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಆಗಿ ನೇಮಿಸಿ ವರ್ಗಾಯಿಸಿತ್ತು. ಅದರಂತೆ ಇಂದು ಜಿಲ್ಲೆಯ ಜಿಲ್ಲಾಧಿಕಾರಿಗಳ ಹುದ್ದೆಯ ಕಾರ್ಯಭಾರವನ್ನು ವಹಿಸಿಕೊಂಡರು.

ಕಲಬುರಗಿ ನೂತನ ಜಿಲ್ಲಾಧಿಕಾರಿಗಳಾಗಿ ಬಿ.ಶರತ್ ಅಧಿಕಾರ ಸ್ವೀಕಾರ

By

Published : Aug 31, 2019, 3:08 PM IST

ಕಲಬುರಗಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಬಿ.ಶರತ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ‌.ಶರತ್ ಅವರನ್ನು ಸರ್ಕಾರವು ಇತ್ತೀಚೆಗೆ ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿ ಆಗಿ ನೇಮಿಸಿ ವರ್ಗಾಯಿಸಿತ್ತು. ಅದರಂತೆ ಇಂದು ಜಿಲ್ಲೆಯ ಜಿಲ್ಲಾಧಿಕಾರಿಗಳ ಹುದ್ದೆಯ ಕಾರ್ಯಭಾರವನ್ನು ವಹಿಸಿಕೊಂಡರು.

2011ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ಬಿ.ಶರತ್ ಅವರು ಮೂಲತಃ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯವರಾಗಿದ್ದು, ಈ ಹಿಂದೆ ಬೀದರ್​ ಮತ್ತು ಮಂಡ್ಯ ಜಿಲ್ಲಾ ಪಂಚಾಯತ್ ಸಿ.ಇ.ಒ. ಆಗಿ ಸೇವೆ ಸಲ್ಲಿಸಿದ್ದಾರೆ. ಇನ್ನು ನಿರ್ಗಮಿತ ಜಿಲ್ಲಾಧಿಕಾರಿ ಅರ್.ವೆಂಕಟೇಶ ಕುಮಾರ ಅವರು 2017ರ ಜುಲೈ 31ರಂದು ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಆಧಿಕಾರ ವಹಿಸಿಕೊಂಡಿದ್ದು, ಇಂದಿಗೆ ಎರಡು ವರ್ಷ ಸೇವೆಯನ್ನು ಪುರೈಸಿದಂತಾಗಿದೆ.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶರಣಪ್ಪ, ಸಹಾಯಕ ಆಯುಕ್ತರಾದ ರಾಹುಲ ಪಾಂಡ್ವೆ, ರಮೇಶ ಕೋಲಾರ, ಐಎಎಸ್ ಪ್ರೊಬೇಷನರಿ ಅಧಿಕಾರಿ ಡಾ. ಗೋಪಾಲಕೃಷ್ಣ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ್ ಚಿಂಚೋಳಿಕರ ಇದ್ದರು.

ABOUT THE AUTHOR

...view details