ಕಲಬುರಗಿ: ಕೇಂದ್ರ ಬಜೆಟ್ ನಿರಾಶದಾಯಕವಾಗಿದ್ದು, ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ ಮುಂದುವರೆದಿದೆ. ರಾಜ್ಯದಿಂದ ಆಯ್ಕೆಯಾಗಿರುವ ಹಣಕಾಸು ಸಚಿವರು ರಾಜ್ಯದ ಬಗ್ಗೆ ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಪ್ರೀಯಾಂಕ್ ಖರ್ಗೆ ಹೇಳಿದ್ದಾರೆ.
ಈ ಬಾರಿಯ ಬಜೆಟ್ನಲ್ಲಿ ವಿತ್ತ ಸಚಿವರ ಮೇಲೆ ಒತ್ತಡ ತಂದು ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಮನವೊಲಿಸುವಲ್ಲಿ ರಾಜ್ಯದ 25 ಸಂಸದರು ವಿಫಲರಾಗಿದ್ದಾರೆ ಪ್ರಿಯಾಂಕ್ ಖರ್ಗೆ ಅಸಮಾಧಾನವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಕಲಬುರಗಿಯಲ್ಲಿ ಪ್ರತ್ಯೇಕ ರೈಲ್ವೆ ವಲಯ, ಟೆಕ್ಸ್ಟೈಲ್ ಪಾರ್ಕ್, ನಿಮ್ಜ್ ಯೋಜನೆಗಳನ್ನು ಕೈಬಿಡಲಾಗಿದೆ. ಕೇಂದ್ರ ರಸ್ತೆ ಅನುದಾನದಿಂದ ನಯಾಪೈಸೆ ಬಿಡುಗಡೆಯಾಗಿಲ್ಲ, ಉದ್ಯೋಗ ಖಾತ್ರಿ ಯೋಜನೆಗೆ ಕತ್ತರಿ ಹಾಕಲಾಗಿದೆ. ಜೊತೆಗೆ ಗರೀಬ್ ಕಲ್ಯಾಣ ಯೋಜನೆಯಿಂದ ಜಿಲ್ಲೆಯನ್ನು ಕೈಬಿಡಲಾಗಿದೆ. ಕಡೇಚೂರು ಕೈಗಾರಿಕ ವಲಯದಲ್ಲಿ ಉದ್ಯಮಗಳ ಸ್ಥಾಪನೆಗೆ ಯಾವುದೇ ಪ್ರಸ್ತಾಪ ಮಾಡಿಲ್ಲ, ಇಷ್ಟೆಲ್ಲ ಅನ್ಯಾಯ ನಡೆಯುತ್ತಿದ್ದರು ಬಿಜೆಪಿ ಸಂಸದರು ಹಾಗೂ ಶಾಸಕರು ಕೈಕಟ್ಟಿಕೊಂಡು ಕುಳಿತು ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆಂದು ಆರೋಪ ಮಾಡಿದ್ದಾರೆ.
ಇದನ್ನು ಓದಿ:ಕೇಂದ್ರದ ಬಜೆಟ್ ಸರ್ಕಾರದ ದಿವಾಳಿತನವನ್ನು ಎತ್ತಿ ತೋರಿಸುತ್ತದೆ: ಯುಟಿ ಖಾದರ್