ಕಲಬುರಗಿ: ಪೌರತ್ವ ಮಸೂದೆ ವಿರೋಧಿಸಿ ಕಲಬುರಗಿ ಬಂದ್ ಕರೆ ನೀಡುವ ಜೊತೆಗೆ ನಿಷೇಧಾಜ್ಞೆ ಧಿಕ್ಕರಿಸಿ ಬೃಹತ್ ಮೆರವಣಿಗೆ ನಡೆಸಿದ ಹಿನ್ನೆಲೆ ಕೆ.ಎಸ್.ಆರ್.ಪಿ. ಎಡಿಜಿಪಿ ಅಲೋಕ್ ಕುಮಾರ್ ಇಂದು ನಗರಕ್ಕೆ ಭೇಟಿ ನೀಡಿದ್ದಾರೆ.
ನಿಷೇಧಾಜ್ಞೆ ಧಿಕ್ಕರಿಸಿ ಕಲಬುರಗಿಯಲ್ಲಿ ಬೃಹತ್ ಮೆರವಣಿಗೆ: ನಗರಕ್ಕೆ ಅಲೋಕ್ಕುಮಾರ್ ಭೇಟಿ - ಕಲಬುರಗಿಗೆ ಭೇಟಿ ನೀಡಿದ ಅಲೋಕ್ಕುಮಾರ್
ಅಲೋಕ್ಕುಮಾರ್ ಇಂದು ಕಲಬುರಗಿಗೆ ಭೇಟಿ ನೀಡಿದ್ದು, ಗುರುವಾರ ಘಟನೆಯ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ನಗರದಲ್ಲಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿದ ನಂತರ ರೋಜಾ ಪ್ರದೇಶ ಹಾಗೂ ನಗರದ ಹಲವೆಡೆ ಭೇಟಿ ನೀಡಿ ಬಂದೋಬಸ್ತ್ ಪರಿಶೀಲಿಸಿದರು. ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಾಗಿ ವಾಸಿಸುವ ಪ್ರದೇಶದಲ್ಲಿ ಪರಿಶೀಲಿಸಿದರು. ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸಿದ ಅಲೋಕ್ ಕುಮಾರ್, ವ್ಯಾಪಾರ ಹೇಗೆ ನಡೆಯುತ್ತಿದೆ ಎಂಬುದು ಸೇರಿದಂತೆ ಇತ್ಯಾದಿ ವಿಷಯಗಳ ಕುರಿತು ಕುಶಲೋಪರಿ ವಿಚಾರಿಸಿದರು.
ಇದೇ ವೇಳೆ ಅಲೋಕ್ಕುಮಾರ್ ಅವರಿಗೆ ಮುಸ್ಲಿಂ ಮುಖಂಡರು ಸನ್ಮಾನ ಮಾಡಿ ಗೌರವಿಸಿದರು. ನಿನ್ನೆಯ ಘಟನೆಯ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಕಲಬುರಗಿಯಲ್ಲಿ ಎಸ್ಪಿ ಯಾಗಿ ಈಶಾನ್ಯ ವಲಯ ಐಜಿಪಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರೋ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಲೋಕ್ ಕುಮಾರ್ರನ್ನು ಕಲಬುರಗಿಗೆ ಕಳುಹಿಸಿದೆ.