ಕಲಬುರಗಿ:ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಮಲಾಪುರ ತಾಲೂಕಿನ ಜೀವನಗಿ ಬಳಿ ನಡೆದಿದೆ.
ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ರ್ದುಮರಣ - ಕಲಬುರಗಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ
ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಮಲಾಪುರ ತಾಲೂಕಿನ ಜೀವನಗಿ ಬಳಿ ನಡೆದಿದೆ.
ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ರ್ದುಮರಣ
ಪ್ರಿಯಾಂಕಾ (20) ಹಾಗೂ ಕಮಲಾಬಾತಿ (55) ಮೃತರು. ಇವರು ಬೀದರ್ ಜಿಲ್ಲೆಯ ಔರಾದ್ ತಾಲೂಕಿನವರಾಗಿದ್ದು, ಬೀದರ್ನಿಂದ ರಟಕಲ್ ರೇವಣಸಿದ್ದೇಶ್ವರ ದೇವಸ್ಥಾನಕ್ಕೆ ಹೊರಟಿದ್ದಾಗ ಘಟನೆ ಸಂಭವಿಸಿದೆ. ಕಾರಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.