ಕರ್ನಾಟಕ

karnataka

ETV Bharat / state

ನಿಷೇಧಾಜ್ಞೆ ಉಲ್ಲಂಘನೆ  ಆರೋಪ: ಮಾಜಿ ಸಚಿವ ವಿರುದ್ಧ ಕೇಸ್ - ಶರಣಪ್ರಕಾಶ ಪಾಟೀಲ ವಿರುದ್ಧ ಕೊರೊನಾ ನಿಯಂ ಉಲ್ಲಂಘನೆ ಆರೋಪ

ಕೊರೊನಾ ನಿಷೇಧಾಜ್ಞೆ ಉಲ್ಲಂಘಿಸಿ ಸಭೆ ನಡೆಸಿದ ಆರೋಪದಡಿ ಮಾಜಿ ಸಚಿವ ಶರಣಪ್ರಕಾಶ ಪಾಟೀಲ್​​​ ಸೇರಿ 23 ಜನರ ವಿರುದ್ಧ ದೂರು ದಾಖಲಾಗಿದೆ.

case against ex minister sharanaprakash patil
ಮಾಜಿ ಸಚಿವ ಶರಣಪ್ರಕಾಶ ಪಾಟೀಲ ವಿರುದ್ಧ ಕೇಸ್

By

Published : May 16, 2020, 8:02 PM IST

ಕಲಬುರಗಿ:ಕೊರೊನಾ ನಿಷೇಧಾಜ್ಞೆ ಉಲ್ಲಂಘಿಸಿ ಸಭೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಸಚಿವ ಶರಣಪ್ರಕಾಶ ಪಾಟೀಲ ಸೇರಿ 23 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಾಜಿ ಸಚಿವ ಶರಣಪ್ರಕಾಶ ಪಾಟೀಲ ವಿರುದ್ಧ ಕೇಸ್
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸುಲೇಪೇಟೆ ಗ್ರಾಮದ ಕಲ್ಯಾಣ ಮಂಟಪವೊಂದರಲ್ಲಿ ಮೇ 13 ರಂದು ಸಭೆ ನಡೆದಿತ್ತು. ಕೊರೊನಾ ಜಾಗೃತಿ ಕುರಿತು ಶರಣಪ್ರಕಾಶ ಪಾಟೀಲ ಸಭೆ ನಡೆಸಿದ್ದರು. ಕಾಂಗ್ರೆಸ್ ಮುಖಂಡರು, ತನ್ನ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದ ಪಾಟೀಲ ನಿಷೇಧಾಜ್ಞೆ ಉಲ್ಲಂಘಿಸಿ ಸಭೆ ನಡೆಸಿದ್ದಾರೆ ಎಂದು ಆರೋಪಿಸಿ ಶರಣಪ್ರಕಾಶ ಪಾಟೀಲ ಮತ್ತು ಹಲವು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮಾಜಿ ಸಚಿವ ಶರಣಪ್ರಕಾಶ ಪಾಟೀಲ ವಿರುದ್ಧ ಕೇಸ್

ಸುಲೇಪೇಟೆ ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಮುನೀರ್ ಅಹ್ಮದ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಸುಲೇಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

For All Latest Updates

ABOUT THE AUTHOR

...view details