ಕರ್ನಾಟಕ

karnataka

ETV Bharat / state

ಶಾಸಕ ಪ್ರಿಯಾಂಕ್ ಖರ್ಗೆಗೆ ಶೂಟ್ ಮಾಡುವ ಹೇಳಿಕೆ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಕೇಸ್ - ಬಿಜೆಪಿ ಮುಖಂಡ ಮಣಿಕಂಠ ರಾಠೋಡ್

ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಶೂಟ್ ಮಾಡಲು ನಾವು ರೆಡಿ ಇದ್ದೇವೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ವಿರುದ್ಧ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ.

case-filed-against-bjp-leader-over-threat-to-mla-priyank-kharge
ಶಾಸಕ ಪ್ರಿಯಾಂಕ್ ಖರ್ಗೆಗೆ ಶೂಟ್ ಮಾಡುವ ಹೇಳಿಕೆ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಕೇಸ್

By

Published : Nov 13, 2022, 10:53 PM IST

ಕಲಬುರಗಿ:ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ನಗರದ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ. ಐಪಿಸಿ ಸೆಕ್ಷನ್ 506ರಡಿ ಜೀವ ಬೆದರಿಕೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಶೂಟ್​ ಮಾಡೋದಾದರೆ ಮಾಡಿ.. ನಾವೂ ನಿಮಗೆ ಶೂಟ್ ಮಾಡ್ತೇವೆ: ಪ್ರಿಯಾಂಕ್​ಗೆ ಬಿಜೆಪಿ ಮುಖಂಡನ ಎಚ್ಚರಿಕೆ

ಪ್ರಿಯಾಂಕ್ ಖರ್ಗೆ ಅವರಿಗೆ ಶೂಟ್ ಮಾಡಲು ನಾವು ರೆಡಿ ಇದ್ದೇವೆ ಎಂದು ಮಣಿಕಂಠ ರಾಠೋಡ್​ ಹೇಳಿಕೆ ನೀಡಿದ್ದರು. ಹೀಗಾಗಿ ಮಣಿಕಂಠ ರಾಠೋಡ್ ಹೇಳಿಕೆ ಖಂಡಿಸಿ ಮತ್ತು ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಆಗ್ರಹಿಸಿ ಶನಿವಾರ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್​ ಕಾರ್ಯಕರ್ತರು, ಎಸ್ಪಿ ಇಶಾ ಪಂತ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಮಣಿಕಂಠ ರಾಠೋಡ್ ವಿರುದ್ಧ ಪೊಲೀಸ್​ ಕೇಸ್​ ದಾಖಲಾಗಿದೆ.

ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಗೆ ಕೊಲೆ ಬೆದರಿಕೆ ಆರೋಪ: ಬಿಜೆಪಿ ಮುಖಂಡನ ಬಂಧಿಸುವಂತೆ ಕೈ ಕಾರ್ಯಕರ್ತರಿಂದ ಎಸ್ಪಿ ಕಚೇರಿ ಮುತ್ತಿಗೆ

ABOUT THE AUTHOR

...view details