ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ ವಿವಿಧ ಕಟ್ಟಡಗಳ ಉದ್ಘಾಟನಾ ಸಮಾರಂಭಕ್ಕೆ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವುದು ಹಲವರ ಕೆಂಗಣ್ಣಿಗೆ ಗುರಿಯಾಗಿದೆ.
ಕಲಬುರಗಿಯ ಕೇಂದ್ರೀಯ ವಿವಿ ವಿವಿಧ ಕಟ್ಟಡಗಳ ಉದ್ಘಾಟನಾ ಸಮಾರಂಭಕ್ಕೆ ಖರ್ಗೆಗಿಲ್ಲ ಆಹ್ವಾನ
ರಾಜಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನಿಸದಿರುವುದು ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.
ಕಲಬುರಗಿ ಕೇಂದ್ರೀಯ ವಿವಿ ವಿವಿಧ ಕಟ್ಟಡಗಳ ಉದ್ಘಾಟನಾ ಸಮಾರಂಭ
ಸಂಸದ ಉಮೇಶ್ ಜಾಧವ್, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹಾಗೂ ಆಳಂದ ಶಾಸಕ ಸುಭಾಷ್ ಗುತ್ತೆದಾರ ಸೇರಿದಂತೆ ಜಿಲ್ಲೆಯ ಹಲವು ಮುಖಂಡರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
ಆದರೆ, ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿಗೆ ತರುವಲ್ಲಿ ಮತ್ತು ಸ್ಥಾಪನೆಯಲ್ಲಿ ಕಾರಣೀಭೂತರಾದ ರಾಜಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನಿಸದಿರುವುದು ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.