ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಲಬುರಗಿ ಭಾಗದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಬಳ್ಳಾರಿಯ ತೋರಣಗಲ್ನಿಂದ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಇಲ್ಲಿಯೂ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಬಿಎಸ್ವೈ - kalburgi news
ಉತ್ತರ ಕರ್ನಾಟಕದಲ್ಲಿ ಪ್ರವಾಹ ಹಿನ್ನೆಲೆ ಸಿಎಂ ಬಿಎಸ್ವೈ ವೈಮಾನಿಕ ಸಮೀಕ್ಷೆ ಆರಂಭಿಸಿದ್ದಾರೆ. ಕಲಬುರಗಿಯ ಪ್ರವಾಹ ವೀಕ್ಷಣೆ ನಡೆಸಿದ ಬಳಿಕ ವಿಜಯಪುರಕ್ಕೆ ತೆರಳಲಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡ ಸಿಎಂ ಬಿಎಸ್ವೈ
ಸಮೀಕ್ಷೆ ಬಳಿಕ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಅತಿವೃಷ್ಟಿ ಹಾಗೂ ಭೀಮಾ ನದಿ ಪ್ರವಾಹದ ಹಾನಿ ಕುರಿತು ಅಧಿಕಾರಿಗಳ ಜೊತೆ ಸಿಎಂ ಚರ್ಚಿಸಿ ಮಾಹಿತಿ ಪಡೆಯಲಿದ್ದಾರೆ. ಅಧಿಕಾರಿಗಳ ಜೊತೆ ಒಂದು ಗಂಟೆ ಚರ್ಚೆ ನಂತರ ಸಿಎಂ ಮತ್ತೆ ವಿಜಯಪುರದಲ್ಲಿ ವೈಮಾನಿಕ ಸಮೀಕ್ಷೆಗೆ ತೆರಳಲಿದ್ದಾರೆ. ಇದಲ್ಲದೆ ಕಲಬುರಗಿಯಲ್ಲಿನ ವೈಮಾನಿಕ ಸಮೀಕ್ಷೆ ವೇಳೆ ಸಿಎಂಗೆ ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಸಾಥ್ ನೀಡಿದರು.