ಕರ್ನಾಟಕ

karnataka

ETV Bharat / state

ರೈಲ್ವೆ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಹೊರಟಿದ್ದು, ಇದರಿಂದಾಗಿ ಜನಸಾಮನ್ಯರ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ ಈ ನಿರ್ಧಾರವನ್ನು ಈ ಕೂಡಲೇ ಸರ್ಕಾರ ಕೈ ಬಿಡಬೇಕು ಎಂದು ಸಿಐಟಿಯು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿತು.

CITU protests
ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ

By

Published : Jul 20, 2020, 1:45 PM IST

ಕಲಬುರಗಿ: ರೈಲ್ವೆ ಇಲಾಖೆ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ನಗರದ ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲಾಯಿತು.

ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ

ಸಿಐಟಿಯು ಮುಖಂಡ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈಲ್ವೆ ಇಲಾಖೆ ಖಾಸಗೀಕರಣ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕ ಉದ್ಯಮ, ಜನಸಾಮಾನ್ಯರ ಜೀವನಾಡಿಯಾಗಿರೋ ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡುವುದಕ್ಕೆ ಕೇಂದ್ರ ಸರ್ಕಾರ ಹುನ್ನಾರ ನಡೆಸಿದೆ. ಇದರಿಂದ ಪ್ರಯಾಣಿಕರಿಗೆ ಸಿಗೋ ಸಬ್ಸಿಡಿ ರದ್ದಾಗುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು.

ಹಂತ ಹಂತವಾಗಿ ರೈಲ್ವೆ ಖಾಸಗೀಕರಣ ಮಾಡುವುದಕ್ಕೆ ಕೇಂದ್ರ ಸರ್ಕಾರ ಮುಂದಾಗಿರುವುದು ಖಂಡನೀಯ. ಈ ಕೂಡಲೇ ರೈಲ್ವೆ ಖಾಸಗೀಕರಣದ ಯೋಜನೆಯನ್ನು ಕೈಬಿಡಬೇಕೆಂದು ಆಗ್ರಹಿಸಿ ರೈಲ್ವೆ ಅಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿಲಾಯಿತು.

ABOUT THE AUTHOR

...view details