ಕಲಬುರಗಿ: ನಗರದಲ್ಲಿ ಬೆಳ್ಳಂಬೆಳಗ್ಗೆ ಮಹಾನಗರ ಪಾಲಿಕೆಯ ಜೆಸಿಬಿಗಳು ಘರ್ಜಿಸಿವೆ. ಅಕ್ರಮವಾಗಿ ತಲೆ ಎತ್ತಿದ್ದ ಅಂಗಡಿಗಳ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ.
ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ: ಅಕ್ರಮ ಕಟ್ಟಡಗಳ ತೆರವು - ಕಲಬುರಗಿ ಸುದ್ದಿ
ಕಲಬುರಗಿ ಜಿಲ್ಲಾ ನ್ಯಾಯಾಲಯದ ವೃತ್ತದಲ್ಲಿದ್ದ ಅನಧಿಕೃತ ಅಂಗಡಿಗಳ ತೆರವು ಮಾಡಲಾಗುತ್ತಿದೆ. ಮುಖ್ಯ ರಸ್ತೆ ಪಕ್ಕದಲ್ಲಿ ಚರಂಡಿ ಮೇಲೆ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ನೂರಾರು ಜೆರಾಕ್ಸ್, ಟೈಪಿಂಗ್ ಅಂಗಡಿಗಳನ್ನು ತೆರವು ಮಾಡಲಾಗುತ್ತಿದೆ.
ಅಕ್ರಮ ಕಟ್ಟಡಗಳ ತೆರವು
ಜಿಲ್ಲಾ ನ್ಯಾಯಾಲಯ ವೃತ್ತದಲ್ಲಿದ್ದ ಅನಧಿಕೃತ ಅಂಗಡಿಗಳ ತೆರವು ಮಾಡಲಾಗುತ್ತಿದೆ. ಮುಖ್ಯರಸ್ತೆ ಪಕ್ಕದಲ್ಲಿ ಚರಂಡಿ ಮೇಲೆ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಜೆರಾಕ್ಸ್, ಟೈಪಿಂಗ್ ಅಂಗಡಿಗಳನ್ನು ತೆರವು ಮಾಡಲಾಗುತ್ತಿದೆ.
ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ವತಃ ಎದುರು ನಿಂತು ಅಂಗಡಿಗಳ ತೆರವು ಮಾಡುತ್ತಿದ್ದಾರೆ. ಕಲಬುರಗಿ ನಗರದ ಹಲವಡೆ ಅನಧಿಕೃತ ಅಂಗಡಿಗಳು ತಲೆ ಎತ್ತಿರುವ ಬಗ್ಗೆ ಈಟಿವಿ ಭಾರತ ಸುದ್ದಿ ಬಿತ್ತರಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಈ ಕಾರ್ಯಾಚರಣೆ ಆರಂಭಿಸಿದ್ದಾರೆ.
Last Updated : Sep 8, 2020, 11:53 AM IST