ಕಲಬುರಗಿ:ಕಲ್ಯಾಣ ಕರ್ನಾಟಕ ಉತ್ಸವದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕಲಬುರಗಿ ನಗರಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ಕಲಬುರಗಿಯ ಸರಡಗಿ ಏರ್ರ್ಪೋಟ್ಕ್ಕೆ ಬಂದಿಳಿದ ಸಿಎಂ, ನೇರವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತಕ್ಕೆ ಆಗಮಿಸಿ ಪಟೇಲ್‌ರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ನಂತರ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸುವ ಮೂಲಕ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿದರು. ಪೊಲೀಸ್ ಪರೇಡ್ ಮೂಲಕ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ, ಬೃಹತ್ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಹಾಗೂ 9624.11 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಲೋಕಾರ್ಪಣೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ಅವರು ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಅಂದಿನ ಯುಪಿಎ ಸರ್ಕಾರಕ್ಕೆ ಎಚ್ಚರಿಕೆ ನೀಡಿದಾಗ 371 ಜೆ ಕಲಂ ಜಾರಿಗೆ ತರಲಾಯಿತು. 371 ಜಾರಿ ನಂತರ ಅಭಿವೃದ್ಧಿಯ ಆಸೆ ಚಿಗುರಿತ್ತು.