ಕರ್ನಾಟಕ

karnataka

ETV Bharat / state

ಕೇರಳದಲ್ಲಿ ಸಿಎಂ ಬಿಎಸ್​ವೈ ಕಾರು ತಡೆದ ವಿಚಾರ: ಕಲಬುರಗಿಯಲ್ಲಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ - ಸಿ ಎ

ಕೇರಳದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರು ತಡೆದು ಕಪ್ಪು ಬಾವುಟ ಪ್ರದರ್ಶಿಸಿದ್ದನ್ನು ಖಂಡಿಸಿ ಕಲಬುರಗಿಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

cm-car-block-issue-in-kerala-dot-protest-by-karave-activiststs-in-kalburgi
ಕೇರಳದಲ್ಲಿ ಸಿಎಂ ಕಾರು ತಡೆ ವಿಚಾರ...ಕಲಬುರಗಿಯಲ್ಲಿ ಕರವೇ ಕಾರ್ಯಕರ್ತರಿಂದ ಬಾರಿ ಪ್ರತಿಭಟನೆ

By

Published : Dec 30, 2019, 4:15 PM IST

ಕಲಬುರಗಿ:ಕೇರಳದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರು ತಡೆದು ಕಪ್ಪು ಬಾವುಟ ಪ್ರದರ್ಶಿಸಿದ್ದನ್ನು ಖಂಡಿಸಿ ಕಲಬುರಗಿಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕೇರಳದಲ್ಲಿ ಸಿಎಂ ಕಾರು ತಡೆದ ವಿಚಾರ: ಕಲಬುರಗಿಯಲ್ಲಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ

ಸಿಎಂ ಕಳೆದ ವಾರ ಕೇರಳ ರಾಜ್ಯಕ್ಕೆ ಹೋದ ಸಂದರ್ಭದಲ್ಲಿ ಅಲ್ಲಿನ ಕೆಲ ಸಂಘಟನೆಗಳು ಅವರ ಕಾರು ತಡೆದು, ಕಪ್ಪು ಬಾವುಟ ಪ್ರದರ್ಶಿಸಿದ್ದವು. ಕಪ್ಪು ಬಾವುಟ ಪ್ರದರ್ಶಿಸಿರುವ ಸಂಘಟನೆಗಳು ಹಾಗೂ ಕೆಲ ರಾಜಕೀಯ ಪಕ್ಷಗಳು ಉದ್ಧಟತನದಿಂದ ವರ್ತಿಸಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ನಗರದ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ತಕ್ಷಣ ಕೇರಳ ಸರ್ಕಾರ ಸಿಎಂ ಬಿಎಸ್​​ವೈ ಅವರಿಗೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ ಅವರು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ‌.

ABOUT THE AUTHOR

...view details