ಕಲಬುರಗಿ:ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇದೇ ಜೂನ್ 22 ರಂದು ಕಲಬುರಗಿ ತಾಲೂಕಿನ ಹೇರೂರ (ಬಿ) ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಜನತಾ ದರ್ಶನಕ್ಕೆ ಕೈಗೊಳ್ಳಲಾಗುತ್ತಿರುವ ಪೂರ್ವಸಿದ್ಧತೆಯನ್ನು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕಲಬುರಗಿಯಲ್ಲಿ ಜೂನ್ 22ರಂದು ಸಿಎಂ ಗ್ರಾಮವಾಸ್ತವ್ಯ - undefined
ಕಲಬುರಗಿಯಲ್ಲಿ ಜೂನ್ 22ರಂದು ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯ ಹೂಡಲಿದ್ದು ಜೊತೆಗೆ ಜನತಾ ದರ್ಶನವನ್ನು ನಡೆಸಲಿದ್ದಾರೆ.
ಜನತಾ ದರ್ಶನ ಕಾರ್ಯಕ್ರಮ ನಡೆಯುವ ಹುಲಿಕಂಠೇಶ್ವರ ದೇವಸ್ಥಾನ ಪಕ್ಕದ ಸ್ಥಳಕ್ಕೆ ಭೇಟಿ ನೀಡಿದಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್, ಜನತಾ ದರ್ಶನ ಕಾರ್ಯಕ್ರಮಕ್ಕೆ ಸುಮಾರು 8ರಿಂದ10 ಸಾವಿರ ಜನ ಸೇರುವ ನಿರೀಕ್ಷೆ ಇದ್ದು, ಸಮಾರಂಭದ ಸ್ಥಳದಲ್ಲಿ ಸಂಪೂರ್ಣವಾಗಿ ಶಾಮಿಯಾನ ವ್ಯವಸ್ಥೆ ಮಾಡುವಂತೆ ಹಾಗೂ ಮುಖ್ಯ ವೇದಿಕೆ ಬಳಿ ಮಳೆ ಬಂದರು ಯಾವುದೇ ತೊಂದರೆಯಾಗದಂತೆ ವಾಟರ್ ಪ್ರೂಪ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮುಖ್ಯಮಂತ್ರಿಗಳು ವಾಸ್ತವ್ಯ ಮಾಡಲಿರುವ ಪ್ರಾಥಮಿಕ ಶಾಲೆಗೂ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಶಾಲಾ ಆವರಣ ಸ್ವಚ್ಛಗೊಳಿಸುತ್ತಿರುವ ಕಾರ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗುವ ಸ್ಥಳವನ್ನು ವೀಕ್ಷಿಸಿ ಅಧಿಕಾರಿಗಳಿಗೆ ಕೆಲವು ನಿರ್ದೇಶನಗಳನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಡಾ.ಪಿ.ರಾಜಾ ಸೇರಿದಂತೆ ಬಹುತೇಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.