ಕರ್ನಾಟಕ

karnataka

ETV Bharat / state

ಅಂತೂ ನನಸಾಯ್ತು ಕಲಬುರಗಿ ಜನರ ಬಹುದಿನದ ಕನಸು....ವಿಮಾನ ನಿಲ್ದಾಣ ಉದ್ಘಾಟಿಸಿದ ಸಿಎಂ - 742 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣ

ಕಲಬುರಗಿ ವಿಮಾನ ನಿಲ್ದಾಣವನ್ನು ಮುಖ್ಯಮಂತ್ರಿ ಬಿ.ಎಸ್​​. ಯಡಿಯೂರಪ್ಪ ಉದ್ಘಾಟನೆ ಮಾಡಿದ್ರು. ಸೇಡಂ ರಸ್ತೆಯ ಶ್ರೀನಿವಾಸ ಸರಡಗಿ ಬಳಿ 181 ಕೋಟಿ ರೂಪಾಯಿ ವೆಚ್ಚದಲ್ಲಿ 742 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗಿದೆ.

ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ

By

Published : Nov 22, 2019, 6:08 PM IST

ಕಲಬುರಗಿ:ಕಲ್ಯಾಣ ಕರ್ನಾಟಕದ ಬಹುದಿನಗಳ ಕನಸು ಕೊನೆಗೂ ನನಸಾಗಿದ್ದು, ಕಲಬುರಗಿಯಲ್ಲಿ ಲೋಹದ ಹಕ್ಕಿ ಹಾರಾಟ ಆರಂಭಗೊಂಡಿದೆ. ಬೆಂಗಳೂರಿನಿಂದ ವಿಮಾನದಲ್ಲಿ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಕಲಬುರಗಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು.

ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಬಿ.ಎಸ್​. ಯಡಿಯೂರಪ್ಪ, ಹೆಸರಿಟ್ಟರಷ್ಟೇ ಕಲ್ಯಾಣವಾಗಲ್ಲ. ಹೆಸರು ಬದಲಿಸಿದಂತೆ ಈ ಭಾಗದ ಅಭಿವೃದ್ಧಿ ಪಥ ಬದಲಾಯಿಸಿ, ನಿಜವಾದ ಕಲ್ಯಾಣ ಮಾಡೋದಾಗಿ ಭರವಸೆ ನೀಡಿದರು.

ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ

ಸೇಡಂ ರಸ್ತೆಯ ಶ್ರೀನಿವಾಸ ಸರಡಗಿ ಬಳಿ 181 ಕೋಟಿ ರೂಪಾಯಿ ವೆಚ್ಚದಲ್ಲಿ 742 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ತಲೆಯೆತ್ತಿದೆ. ರಾಜ್ಯದ ಎರಡನೇ ಅತಿದೊಡ್ಡ ರನ್ ವೇ ಎಂಬ ಹೆಗ್ಗಳಿಕೆ ಹೊಂದಿರುವ ವಿಮಾನ ನಿಲ್ದಾಣದ ಉದ್ಘಾಟನೆ ಸಮಾರಂಭ ಇಂದು ನೆರವೇರಿತು ಎಂದರು.

ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಮೋದಿ ಅವರೇ ಆಗಮಿಸಬೇಕಿತ್ತು. ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಅವರು ಬರಲಾಗಿಲ್ಲ. ಹೈದರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡುವ ಮೂಲಕ ಅಭಿವೃದ್ಧಿ ಪಥಕ್ಕೆ ಅಡಿಗಲ್ಲು ಹಾಕಿದ್ದೇನೆ. ಕೆಲವೊಬ್ಬರು ಹೆಸರು ಬದಲಿಸಿದರೆ ಏನು ಪ್ರಯೋಜನ ಅಂತಿದ್ದಾರೆ. ಆದರೆ ನಾನು ಕೇವಲ ಹೆಸರು ಬದಲಿಸಿ ಸುಮ್ಮನೇ ಕೂರಲ್ಲ. ಹೆಸರಿಗೆ ತಕ್ಕಂತೆ ಈ ಭಾಗವನ್ನು ಕಲ್ಯಾಣ ಮಾಡುವುದು ನನ್ನ ಸಂಕಲ್ಪವಾಗಿದೆ. ಮುಂದಿನ ಬಜೆಟ್​ನಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡೋದಾಗಿ ಯಡಿಯೂರಪ್ಪ ಭರವಸೆ ನೀಡಿದರು.

ABOUT THE AUTHOR

...view details