ಕರ್ನಾಟಕ

karnataka

ETV Bharat / state

ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ನೂತನ ಕಟ್ಟಡ ಉದ್ಘಾಟಿಸಿದ ಸಿಎಂ - Kalaburagi Nagar Police Commissionerate

ಕಲಬುರಗಿ ಜಿಲ್ಲೆಯಲ್ಲಿ ನಿರ್ಮಿಸಲಾದ ನೂತನ ನಗರ ಪೊಲೀಸ್ ಆಯುಕ್ತಾಲಯ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

cm-inaugurated-the-new-building-of-kalaburagi-nagar-police-commissionerate
ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ನೂತನ ಕಟ್ಟಡ ಉದ್ಘಾಟಿಸಿದ ಸಿಎಂ

By

Published : Sep 17, 2022, 3:29 PM IST

ಕಲಬುರಗಿ : ನಗರದ ಪೊಲೀಸ್ ಪರೇಡ್ ಮೈದಾನದ ರಸ್ತೆಯಲ್ಲಿ 18.50 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

ಬಳಿಕ ನೂತನ ಕಟ್ಟಡವನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು, ನೂತನ ಕಚೇರಿಯಲ್ಲಿ ಕಾರ್ಯಾರಂಭ ಮಾಡಲು ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ ಅವರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ ಅವರು ನೆನಪಿನ ಕಾಣಿಕೆ ನೀಡಿದರು. ಇದಕ್ಕೂ ಮೊದಲು ಪೊಲೀಸ್ ತುಕಡಿಯಿಂದ ಮುಖ್ಯಮಂತ್ರಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವ ಭಗವಂತ ಖೂಬಾ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮುರುಗೇಶ ಆರ್. ನಿರಾಣಿ, ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಸಚಿವ ಮುನಿರತ್ನ ಮತ್ತಿತರರು ಉಪಸ್ಥಿತರಿದ್ದರು.

ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ನೂತನ ಕಟ್ಟಡ ಉದ್ಘಾಟಿಸಿದ ಸಿಎಂ

ವಿಮ್ಸ್ ಪ್ರಕರಣದ ತನಿಖೆಗೆ ತಂಡ ರಚನೆ.. ವರದಿ ಆಧರಿಸಿ ಕ್ರಮ:ಬಳ್ಳಾರಿಯ ವಿಮ್ಸ್​ ಆಸ್ಪತ್ರೆಯಲ್ಲಿ ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರ ರಚಿಸಿರುವ ತಂಡ ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿದೆ. ತಂಡದ ತನಿಖಾ ವರದಿಯನ್ವಯ ಕ್ರಮ ಕೈಗೊಳ್ಳಲಾಗುವುದು. ಈ ಘಟನೆಯಿಂದ ಅತ್ಯಂತ ನೋವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಘಟನಾ ಸ್ಥಳಕ್ಕೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಭೇಟಿ ನೀಡಿಲ್ಲವೆಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಕರ್ತವ್ಯ ನಾವು ಮಾಡುತ್ತಿದ್ದೇವೆ ಎಂದು ತಿಳಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಇವರ ಮೇಲಿನ ಹಿಂದಿನ ಎಲ್ಲ ಪ್ರಕರಣಗಳು ವಿಫಲವಾಗಿವೆ ಎಂದು ಹೇಳಿದರು.

ಇದನ್ನೂ ಓದಿ :ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ: ಸಿಎಂ ಬೊಮ್ಮಾಯಿ ಅಭಿವೃದ್ಧಿ ಭಾಷಣ

ABOUT THE AUTHOR

...view details