ಕಲಬುರಗಿ:ದತ್ತಾತ್ರೇಯ ಕ್ಷೇತ್ರಕ್ಕೆ ಭೇಟಿ ನೀಡಿದ ಸಿಎಂ ಅವರಿಗೆ ಡಿಸಿಎಂ ಗೋವಿಂದ ಕಾರಜೋಳ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರು ಸಾಥ್ ನೀಡಿದ್ದರು.
ದತ್ತಾತ್ರೇಯ ಕ್ಷೇತ್ರಕ್ಕೆ ಸಿಎಂ ಭೇಟಿ: ಅಭಿವೃದ್ಧಿಗೆ 10 ಕೋಟಿ ರೂ. ಬಿಡುಗಡೆಯ ಭರವಸೆ - CM visited dattatreya temple
ಸಿಎಂ ಯಡಿಯೂರಪ್ಪ ಅವರು ಅಫ್ಜಲ್ಪುರ ತಾಲೂಕಿನ ದೇವಲಗಾಣಗಾಪುರದ ದತ್ತಾತ್ರೇಯ ಕ್ಷೇತ್ರಕ್ಕೆ ಭೇಟಿ ನೀಡಿ ದತ್ತಾತ್ರೇಯ ಪಾದುಕೆಗೆ ವಿಶೇಷ ಪೂಜೆ ಸಲ್ಲಿಸಿದರು.
ಸಿಎಂ
ಪೂಜೆಯ ನಂತರ ಮಾತನಾಡಿದ ಸಿಎಂ, ದೇವಲಗಾಣಗಾಪುರ ಅಭಿವೃದ್ಧಿಗೆ 10 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ರು. ಇನ್ನು ರಾಜ್ಯದಲ್ಲಿ ನೆರೆ ಬರ ಹೆಚ್ಚಾಗಿದ್ದು, ಈಗಾಗಲೇ ಕೇಂದ್ರ ಸರ್ಕಾರ ದೊಡ್ಡ ಮೊತ್ತದ ಪರಿಹಾರ ಬಿಡುಗಡೆ ಮಾಡಿದೆ. ಮುಂಬರುವ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಇನ್ನು, ಮಹಾರಾಷ್ಟ್ರದಲ್ಲಿ ಒಳ್ಳೆಯ ವಾತಾವರಣ ಇದ್ದು, ಹೆಚ್ಚಿನ ಸ್ಥಾನಗಳಲ್ಲಿ ಮೆಜಾರಿಟಿಯಲ್ಲಿ ಬಿಜೆಪಿ ಗೆಲುವು ಖಚಿತವೆಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.