ಕಲಬುರಗಿ:ನೆರೆಪೀಡಿತ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ವೇಳೆ ಬಿಜೆಪಿ ಎಂಎಲ್ಸಿಯನ್ನು ಸಹ ವಿಮಾನ ನಿಲ್ದಾಣದ ಒಳಗೆ ಬಿಡದಿದ್ದಕ್ಕೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.
ಸಿಎಂ ಯಡಿಯೂರಪ್ಪ ಕಲಬುರಗಿ ಹಾಗೂ ಯಾದಗಿರಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಆದ್ರೆ ವಿಮಾನ ನಿಲ್ದಾಣಕ್ಕೆ ಮಾಧ್ಯಮದವರಿಗೆ ನಿರ್ಬಂಧ ಹೇರಲಾಗಿದೆ. ವಿಮಾನ ನಿಲ್ದಾಣದ ಮೇನ್ ಗೇಟ್ ಹೊರಗಡೆಯೇ ಮಾಧ್ಯಮದವರು ನಿಲ್ಲುವಂತಾಗಿದೆ. ಸರ್ಕಾರದ ಆದೇಶ ಇರೋದ್ರಿಂದ ಒಳಗೆ ಬಿಡಲ್ಲ ಎಂದು ಪೊಲೀಸರು ತಡೆ ಹಿಡಿದಿದ್ದಾರೆ. ಈ ವೇಳೆ ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರನ್ನೂ ಹೇಗೆ ಬಿಡುವುದಿಲ್ಲ ಎಂದು ಕಾರ್ಯಕರ್ತರು ಪೊಲೀಸರ ವಿರುದ್ಧ ಕಿಡಿಕಾರಿದರು.