ಕರ್ನಾಟಕ

karnataka

ETV Bharat / state

ಹೈಕಮಾಂಡ್​ ಗ್ರೀನ್​ ಸಿಗ್ನಲ್​ ನೀಡಿದ್ರೆ ಸಂಪುಟ ವಿಸ್ತರಣೆ: ಸಿಎಂ - ಸಂಪುಟ ವಿಸ್ತರಣೆ

ರಾಜ್ಯದಲ್ಲಿ ಅತಿವೃಷ್ಟಿ ಆಗಿರುವುದರಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮತ್ತಿತರ ವಿಷಯಗಳ ಬಗ್ಗೆಯೂ ಪ್ರಧಾನಿ ಮೋದಿ ಹಾಗೂ ಸಚಿವರುಗಳ ಜೊತೆ ಚರ್ಚಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಇದೇ ವೇಳೆ ಹೈಕಮಾಂಡ್​ ಗ್ರೀನ್​ ನೀಡಿದ್ರೆ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ರು.

CM Yediyurappa
ಸಿಎಂ

By

Published : Sep 17, 2020, 12:10 PM IST

ಕಲಬುರಗಿ: ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡಬೇಕೆಂಬ ಅಪೇಕ್ಷೆ ಇದೆ. ಕೇಂದ್ರ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ರೆ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಸಿಎಂ

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇಂದು ದೆಹಲಿಗೆ ಹೋಗ್ತಿದ್ದೇನೆ. ನಾಳೆ ಪ್ರಧಾನಿ ಮೋದಿ ಮತ್ತು ಕೇಂದ್ರದ ಸಚಿವರನ್ನು ಭೇಟಿಯಾಗುತ್ತಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಹೈಕಮಾಂಡ್ ಜೊತೆ ಚರ್ಚಿಸಲಿದ್ದೇನೆ. ಸಚಿವ ಸಂಪುಟದ ಪುನರ್ ರಚನೆ ಅಥವಾ ವಿಸ್ತರಣೆ ಕೇಂದ್ರ ನಾಯಕರ ನಿರ್ಧಾರದ ಮೇಲೆ ಅವಲಂಬಿಸಿದೆ ಎಂದರು‌.

ರಾಜ್ಯದಲ್ಲಿ ಅತಿವೃಷ್ಟಿ ಆಗಿರುವುದರಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡುವುದು ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆಯೂ ಪಿಎಂ ಮೋದಿ ಹಾಗೂ ಸಚಿವರುಗಳ ಜೊತೆ ಚರ್ಚಿಸಲಾಗುವುದು. ಕೋವಿಡ್ ಕಾರಣದಿಂದಾಗಿ ಹಣಕಾಸಿನ ತೊಂದರೆಯಾಗಿದೆ. ಆದರೂ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಿಗದಿಗೊಳಿಸಿದ ಹಣ ಬಿಡುಗಡೆ ಮಾಡುವುದಾಗಿ ಹೇಳಿದರು.

ABOUT THE AUTHOR

...view details