ಕಲಬುರಗಿ:ತಳವಾರರಿಗೆ ಎಸ್.ಟಿ. ಪ್ರಮಾಣ ಪತ್ರ ನೀಡಲು ಆಗ್ರಹಿಸಿ ಕೋಲಿ ಸಮುದಾಯದ ನೇತೃತ್ವದಲ್ಲಿ ಕಲಬುರ್ಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು.
ಮಹಿಳೆಯರು ಜೋಕುಮಾರಸ್ವಾಮಿ ಮೂರ್ತಿಯನ್ನು ತಲೆ ಮೇಲೆ ಇಟ್ಟುಕೊಂಡು ಪ್ರತಿಭಟನೆ ನಡೆಸಿದರು. ಕೋಲಿ ಸಮಾಜದ ಮುಖಂಡ ಲಚ್ಚಪ್ಪ ಜಮಾದಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.