ಕಲಬುರಗಿ:ಡ್ಯೂಟಿ ಮುಗಿಸಿ ಬರುವಾಗ ರಸ್ತೆ ಅಪಘಾತದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಲಬುರಗಿ ಹೊರವಲಯದ ಬೇಲೂರ ಕ್ರಾಸ್ ಮದರ್ ತೆರೆಸಾ ಆಸ್ಪತ್ರೆ ಹತ್ತಿರ ನಡೆದಿದೆ.
ಕನ್ಯಾಕುಮಾರಿ ಮೃತ ಯುವತಿ ಎಂದು ಗುರುತಿಸಲಾಗಿದೆ. ಕಮಲಾಪೂರ ತಾಲೂಕಿನ ಕಿಣ್ಣಿ ಸಡಕ್ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದ ಕನ್ಯಾಕುಮಾರಿ, ಎಂದಿನಂತೆ ಕರ್ತವ್ಯ ನಿರ್ವಹಿಸಿ ಸ್ಕೂಟಿ ವಾಹನದ ಮೇಲೆ ಕಲಬುರಗಿಗೆ ಬರುತ್ತಿದ್ದರು. ಮಾರ್ಗ ಮಧ್ಯೆ ಎತ್ತಿನ ಬಂಡಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.