ಕಲಬುರಗಿ: ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ನಿಧನರಾದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಬ್ರಾಹ್ಮಣ ಸಮುದಾಯ ಹಾಗೂ ಪೇಜಾವರ ಶ್ರೀ ಸೇನೆ ನೇತೃತ್ವದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೇಜಾವರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಶಾಸಕ ದತ್ತಾತ್ರೇಯ ಪಾಟೀಲ ಶ್ರದ್ಧಾಂಜಲಿ ಸಲ್ಲಿಸಿದರು.
ಪೇಜಾವರ ಶ್ರೀಗಳಿಗೆ ಕಲಬುರುಗಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ.. - Condolence for Pejavara Sri at Kalburgi
ಪೇಜಾವರ ಶ್ರೀಗಳು ಕಲಬುರ್ಗಿ ಮೇಲೆ ಅಪಾರ ಕಾಳಜಿ ಹೊಂದಿದ್ದರು. ಈ ಭಾಗದ ನಿರಾಶ್ರಿತರಿಗೆ ವಸತಿ ಕಲ್ಪಿಸಿ ಕೊಡುವುದರ ಜೊತೆಗೆ ಬಡ ಮಕ್ಕಳಿಗಾಗಿ ವಸತಿ ನಿಲಯ ಸ್ಥಾಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ನಿಧನ ನಮಗೆಲ್ಲರಿಗೂ ಬರಸಿಡಿಲು ಅಪ್ಪಳಿಸಿದಂತಾಗಿದೆ.
![ಪೇಜಾವರ ಶ್ರೀಗಳಿಗೆ ಕಲಬುರುಗಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ.. Condolence for Pejavara Sri at Kalburgi](https://etvbharatimages.akamaized.net/etvbharat/prod-images/768-512-5531583-thumbnail-3x2-bng.jpg)
ಕಲಬುರುಗಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ
ಕಲಬುರುಗಿಯಲ್ಲಿ ಪೇಜಾವರ ಶ್ರೀಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ..
ಇದೇ ವೇಳೆ ಮಾತನಾಡಿದ ಅವರು, ಪೇಜಾವರ ಶ್ರೀಗಳು ಕಲಬುರ್ಗಿ ಮೇಲೆ ಅಪಾರ ಕಾಳಜಿ ಹೊಂದಿದ್ದರು. ಈ ಭಾಗದ ನಿರಾಶ್ರಿತರಿಗೆ ವಸತಿ ಕಲ್ಪಿಸಿ ಕೊಡುವುದರ ಜೊತೆಗೆ ಬಡ ಮಕ್ಕಳಿಗಾಗಿ ವಸತಿ ನಿಲಯವನ್ನು ಸ್ಥಾಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ನಿಧನ ನಮಗೆಲ್ಲರಿಗೂ ಬರಸಿಡಿಲು ಅಪ್ಪಳಿಸಿದಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.