ಕರ್ನಾಟಕ

karnataka

ETV Bharat / state

ಬಹಿರಂಗ ಸಭೆಯಲ್ಲಿ ಸಾಷ್ಟಾಂಗ ನಮಸ್ಕಾರ ಹಾಕಿ ಮತಯಾಚನೆ ಮಾಡಿದ ಕೈ ಅಭ್ಯರ್ಥಿ - Sastanga Namaskara

ಕಾಂಗ್ರೆಸ್​ ಅಭ್ಯರ್ಥಿ ಸುಭಾಷ್‌ ರಾಠೋಡ್‌ ಬಹಿರಂಗ ಸಭೆಯಲ್ಲಿಯೇ ತಮಗೆ ಮತ ಹಾಕುವಂತೆ ಸಾಷ್ಟಾಂಗ ನಮಸ್ಕಾರ ಮಾಡುವ ಮೂಲಕ ಜಿಲ್ಲೆಯ ಜನರ ಗಮನ ಸೆಳೆದರು.

ಬಹಿರಂಗ ಸಭೆಯಲ್ಲಿ ಸಾಷ್ಟಾಂಗ ನಮಸ್ಕಾರ ಹಾಕಿದ ಕಾಂಗ್ರೆಸ್​ ಅಭ್ಯರ್ಥಿ ಸುಭಾಷ್​ ರಾಠೋಡ್

By

Published : Apr 30, 2019, 10:16 AM IST

ಕಲಬುರಗಿ:ಜಿಲ್ಲೆಯ ರಾಜಕಾರಣದಲ್ಲಿ ಸಾಷ್ಟಾಂಗ ನಮಸ್ಕಾರ ಸಂಸ್ಕೃತಿ ಮುಂದುವರೆದಿದೆ. ಚಿಂಚೋಳಿಯಲ್ಲಿ ನಡೆದ ಕಾಂಗ್ರೆಸ್​ ಬಹಿರಂಗ ಸಭೆಯಲ್ಲಿ ಅಭ್ಯರ್ಥಿ ಸುಭಾಷ್​ ರಾಠೋಡ್​ ಸಾಷ್ಟಾಂಗ ನಮಸ್ಕಾರ ಹಾಕುವ ಮೂಲಕ ಮತಯಾಚಣೆ ಮಾಡಿದರು.

ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 24 ವರ್ಷಗಳಿಂದ ಚಿಂಚೋಳಿ ಕ್ಷೇತ್ರದಲ್ಲಿ ನಾನು ಸೇವೆ ಸಲ್ಲಿಸುತ್ತಿದ್ದೇನೆ. ಅದನ್ನು ಪರಿಗಣಿಸಿ ಕಾಂಗ್ರೆಸ್​ ಪಕ್ಷ ನನಗೆ ಟಿಕೆಟ್ ನೀಡಿದೆ. ಹಾಗಾಗಿ ನನ್ನನ್ನು ಗೆಲ್ಲಿಸಿ ಅಭಿವೃದ್ಧಿಗೆ ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದರು. ವೇದಿಕೆ ಮೇಲೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರಾದ ಅಜಯ್​ಸಿಂಗ್, ಎಂ.ವೈ.​ ಪಾಟೀಲ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಬಹಿರಂಗ ಸಭೆಯಲ್ಲಿ ಸಾಷ್ಟಾಂಗ ನಮಸ್ಕಾರ ಹಾಕಿದ ಕಾಂಗ್ರೆಸ್​ ಅಭ್ಯರ್ಥಿ ಸುಭಾಷ್​ ರಾಠೋಡ್

ಮುಂದುವರಿದ ಸಾಷ್ಟಾಂಗ ನಮಸ್ಕಾರ:

ಇನ್ನು ಸಾಷ್ಟಾಂಗ ನಮಸ್ಕಾರ ಸಾಂಸ್ಕೃತಿ ಕಳೆದ ವಿಧಾನಸಭಾ ಚುನಾವಣೆಯಿಂದ ಹಾಗೇ ಮುಂದುವರೆದುಕೊಂಡು ಬರುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್​ ಸಾಷ್ಟಾಂಗ ನಮಸ್ಕಾರ ಮಾಡುವ ಮೂಲಕ ಮತದಾರ ಗಮನ ಸೇಳೆದಿದ್ದರು. ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ಬಹಿರಂಗ ಸಮಾವೇಶದಲ್ಲಿ ವೇದಿಕೆ ಮೇಲೆ ದೀರ್ಘ ದಂಡ ನಮಸ್ಕಾರ ಹಾಕಿ ಮತಯಾಚಣೆ ಮಾಡಿದ್ದರು.

ABOUT THE AUTHOR

...view details