ಕಲಬುರಗಿ:ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರದ್ದು ಎಂದು ಹೇಳಲಾಗುತ್ತಿರುವ ಡೈರಿ ಒಂದು ಫೇಕ್ ದಾಖಲೆ ಎಂದುಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಆರೋಪಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು,ರಾಷ್ಟ್ರೀಯ ವಕ್ತಾರ ರಣದೀಪ್ ಸುರ್ಜೇವಾಲ ಅವರು ದುರುದ್ದೇಶ ಇಟ್ಟುಕೊಂಡು ಈ ರೀತಿ ಮಾಡಿದ್ದಾರೆ.
ಸುರ್ಜೇವಾಲ ಬಿಡುಗಡೆ ಮಾಡಿರುವ ಡೈರಿ ಫೇಕ್. ಈ ಕುರಿತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಈಗಾಗಲೆ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ನವರು ಚುನಾವಣೆಯಲ್ಲಿ ಗೆಲ್ಲಲು ಆಗದೆ ಈ ರೀತಿ ಸುಳ್ಳು ಆರೋಪ ಮಾಡಿ ಜನರನ್ನು ಗೊಂದಲಕ್ಕೀಡುಮಾಡುತ್ತಿದ್ದಾರೆ ಎಂದರು.
ಕೂಡಲೇ ರಣದೀಪ್ ಸುರ್ಜಿವಾಲರನ್ನು ವಕ್ತಾರ ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಎಐಸಿಸಿ ರಾಷ್ಟೀಯ ಅಧ್ಯಕ್ಷ ರಾಹುಲ್ ಗಾಂಧಿ ನೈತಿಕ ಹೊಣೆಹೊತ್ತು ಬಹಿರಂಗ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಸುರ್ಜೇವಾಲ ವಿರುದ್ದ ಮಾನನಷ್ಟ ಮೊಕದ್ದಮೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.