ಕಲಬುರಗಿ: ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ನಗರಸಭೆ ಅಧ್ಯಕ್ಷೆ ಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಶಹಬಾದ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಗಿರೀಶ್ ಕಂಬನೂರ್ (42) ಕೊಲೆಯಾದ ವ್ಯಕ್ತಿ. ಕಾಂಗ್ರೆಸ್ ಪಕ್ಷದ ಮುಖಂಡನಾಗಿರುವ ಗಿರೀಶ್ ಕಂಬನೂರ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಳೆ ವೈಷಮ್ಯವೇ ಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ.
ಶಹಬಾದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಟಿಕೆಟ್ ಬುಕ್ ಮಾಡಲು ಬಂದಾಗ ಗಿರೀಶ್‌ನನ್ನ ದುಷ್ಕರ್ಮಿಗಳು ಕೊಲೆ ಮಾಡಿದ್ದಲ್ಲದೇ, ಮಾರಕಾಸ್ತ್ರಗಳನ್ನು ದೇಹದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ನರಳಾಡಿ ಗಿರೀಶ್ ಮೃತಪಟ್ಟಿದ್ದಾರೆ. ಕಳೆದ 2 ವರ್ಷದ ಹಿಂದೆ ಗಿರೀಶ್ ಸಹೋದರ ಸತೀಶ್ ಕಂಬನೂರ್ ಹತ್ಯೆಯಾಗಿತ್ತು.