ಕಲಬುರಗಿ: ರಾಜ್ಯದಲ್ಲಿ ಸದ್ಯ ಕೋಲಾಹಲ ಎಬ್ಬಿಸಿರುವ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಬಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ತಟ್ಟಿದೆ. ಸಿಎಂ ವಾಹನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಐವತ್ತಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲಬುರಗಿ: ಸಿಎಂ ವಾಹನಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ - ಕಲಬುರಗಿಯಲ್ಲಿ ಸಿಎಂಗೆ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಸಿಎಂ ವಾಹನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಐವತ್ತಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಿಎಸ್ಐ ನೇಮಕಾತಿ ಪ್ರಕರಣ ಸಂಬಂಧ ಕಾಂಗ್ರೆಸ್ ಪ್ರತಿಭಟನೆ
ಕಲಬುರಗಿಗೆ ಆಗಮಿಸಿದ ಸಿಎಂಗೆ ಕಾಂಗ್ರೆಸ್ ಯುವ ಘಟಕದ ಕಾರ್ಯಕರ್ತರು ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನಕ್ಕೆ ಆಗ್ರಹಿಸಿದ ಪ್ರತಿಭಟನಾಕಾರರು, ಪಿಎಸ್ಐ ನೇಮಕಾತಿ ಮರು ಪರೀಕ್ಷೆ ನಡೆಸಬೇಕು. ಕೂಡಲೇ ದಿವ್ಯಾ ಹಾಗರಗಿ ಮತ್ತು ಗ್ಯಾಂಗ್ ಅನ್ನು ಬಂಧನ ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ: ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶವಿಲ್ಲ
Last Updated : Apr 21, 2022, 4:57 PM IST