ಕಲಬುರಗಿ: ಬಂಜಾರ ಸಮುದಾಯದ ಮತ ಸೆಳೆಯಲು ಕಾಂಗ್ರೆಸ್ ರಣತಂತ್ರ ರೂಪಿಸಿದೆ. ಈ ಸ್ಟ್ರಾಟೆಜಿಯ ಭಾಗವಾಗಿ ಇಂದು ಬಂಜಾರ ಸಮುದಾಯದ ಕೆಲ ಯುವಕರು ಕಾಂಗ್ರೆಸ್ಗೆ ಸೇರ್ಪಡೆಗೊಂಡರು.
ಕಾಂಗ್ರೆಸ್ ತ್ಯಜಿಸಿ, ಬಿಜೆಪಿ ತೆಕ್ಕೆಗೆ ಜಾರಿದ ಉಮೇಶ್ ಜಾಧವ್ ಅವರನ್ನು ಸೋಲಿಸಲು ಕಾಂಗ್ರೆಸ್ ತಂತ್ರ ರೂಪಿಸಿದೆ. ಕ್ಷೇತ್ರದಲ್ಲಿ ಮೂಲತ: ಬಂಜಾರ ಸಮುದಾಯದವರೇ ಆದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಹಾಗು ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ನಡುವೆ ಪ್ರಬಲ ಪೈಪೋಟಿ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳೂ ಕಲಬುರಗಿಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿವೆ. ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಂಜಾರ ಮತಬುಟ್ಟಿಯನ್ನೇ ನೆಚ್ಚಿಕೊಂಡಿರುವ ಉಭಯ ಪಕ್ಷಗಳು, ಈ ಸಮುದಾಯವನ್ನು ಮನವೊಲಿಸುವ ಕಸರತ್ತು ನಡೆಸುತ್ತಿವೆ.