ಕಲಬುರಗಿ : ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ಖರ್ಗೆಯವರೇ ಕಾಂಗ್ರೆಸ್ನ ಅಧ್ಯಕ್ಷರಾಗಿ ಆಯ್ಕೆಯಾಗಲಿ ಎಂದು ಅವರ ಅಭಿಮಾನಿಗಳು ಇಲ್ಲಿನ ಶ್ರೀ ಶರಣಬಸವೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ 101 ತೆಂಗಿನಕಾಯಿ ಒಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ದೇಶದ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡು ಹೀನಾಯ ಸ್ಥಿತಿಗೆ ತಲುಪಿದ್ದು, ಕಾಂಗ್ರೆಸ್ಗೆ ನೂತನ ಅಧ್ಯಕ್ಷರನ್ನು ನೇಮಿಸಲು ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಮುಂದಾಗಿದ್ದಾರೆ. ಹೀಗಾಗಿ ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಮಲ್ಲಿಕಾರ್ಜುನ ಖರ್ಗೆ ಅವರಿಗೂ ಮಣೆ ಹಾಕಲಾಗಿದೆ.