ಕಲಬುರಗಿ: ಶಾಸಕ ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡುವ ಭರಾಟೆಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಕಾರ್ಯಕರ್ತರು ಕೆರಳಿದ್ದಾರೆ. ಕಲಬುರಗಿ ನಗರದ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿ, ಮಣಿಕಂಠ ರಾಠೋಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಲಿ ಶಾಸಕರಿಗೆ ಬಹಿರಂಗವಾಗಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಮಣಿಕಂಠ ರಾಠೋಡ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೈ ಕಾರ್ಯಕರ್ತರು ಆಗ್ರಹಿಸಿದರು. ರಾಜ್ಯ ಸರ್ಕಾರದ ಹಗರಣಗಳನ್ನು ಬಯಲಿಗೆಳೆದು ವಿಧಾನಸೌಧದ ಒಳಗೆ ಹೊರಗೆ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಳ್ಳುತ್ತಿರುವ ಪ್ರಿಯಾಂಕ್ ಖರ್ಗೆ ಅವರನ್ನ ಮುಗಿಸಲು ಬಿಜೆಪಿ ನಾಯಕರು ತಮ್ಮ ಸ್ಥಳೀಯ ಮುಖಂಡರನ್ನ ಮುಂದೆ ಬಿಟ್ಟು ಪ್ರಯತ್ನ ಮಾಡ್ತಿದ್ದಾರೆ ಎಂದು ದೂರಿದರು.