ಕರ್ನಾಟಕ

karnataka

ETV Bharat / state

ಕಲಬುರಗಿ ಮಹಾನಗರ ಪಾಲಿಕೆಗೂ ವಕ್ಕರಿಸಿದ ಕೊರೊನಾ - ಕಲಬುರಗಿಯಲ್ಲಿ ಕೊರೊನಾ

ಕಲಬುರಗಿಯಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದ್ದು, ಇದೀಗ ನಗರದ ಮಹಾನಗರ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್​ ಇರುವುದು ದೃಢಪಟ್ಟಿದೆ.

Corona
ಕಲಬುರಗಿ

By

Published : Jun 30, 2020, 1:21 PM IST

ಕಲಬುರಗಿ:ಇಲ್ಲಿನ ಮಹಾನಗರ ಪಾಲಿಕೆಗೂ ಕೊರೊನಾ ಬಿಸಿ ತಟ್ಟಿದ್ದು, ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಪಾಲಿಕೆ ಸಿಬ್ಬಂದಿಗೆ ಸೋಂಕು ತಗುಲಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಸೋಂಕಿತ ಜನ ಟ್ರಾವೆಲ್ ಹಿಸ್ಟರಿಯನ್ನು ಪತ್ತೆ ಹಚ್ಚಲಾಗುತ್ತಿದ್ದು, ಸದ್ಯ ಸಿಬ್ಬಂದಿ ಕೆಲಸ ಮಾಡುತ್ತಿದ್ದ ಕೊಠಡಿಯನ್ನು ಸೀಲ್‌ಡೌನ್ ಮಾಡಲಾಗಿದೆ.

ವೈರಸ್ ಹರಡುವ ಭೀತಿಯಿಂದಾಗಿ ಮಹಾನಗರ ಪಾಲಿಕೆಗೆ ಸ್ಯಾನಿಟೈಸ್​​ ಮಾಡಲಾಗಿದೆ ಎಂದು ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ತಿಳಿಸಿದ್ದಾರೆ. ಕಚೇರಿಯ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ಇತರ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದೆ.

ABOUT THE AUTHOR

...view details