ಕಲಬುರಗಿ:ಚಿತ್ತಾಪೂರ ತಾಲೂಕಿನ ಅನ್ನಿಕೇರಿ ತಾಂಡಾದಲ್ಲಿ ನೋವೆಲ್ ಕೊರೊನಾ ಕುರಿತಂತೆ ಜನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಬಂಜಾರ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಸಂಘದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿಲ್ಲಾ ಪಂಚಾಯತಿಯ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಬಂಜಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಎನ್. ಚವ್ಹಾಣ್ ಕಾರ್ಯಕ್ರಮದ ನೇತೃತ್ವ ವಹಿಸಿಕೊಂಡಿದ್ದರು.
ಯುವ ಸಮುದಾಯಕ್ಕೆ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಂತೆ ತಾಂಡಾ ಪ್ರದೇಶದ ನಿವಾಸಿಗಳಲ್ಲಿ ಅರಿವು ಮೂಡಿಸಲಾಯಿತು.
ಸೋಂಕು ಪತ್ತೆಯಾದ ವ್ಯಕ್ತಿಗೆ ಚಿಕಿತ್ಸೆ ನೀಡಲು ಬಂದ ಆರೋಗ್ಯ ಮತ್ತು ಪೊಲೀಸ್ ಸಿಬ್ಬಂದಿಗೆ ಸಹಕರಿಸಬೇಕು. ಆಶಾ ಕಾರ್ಯಕರ್ತೆಯರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳನ್ನು ಗೌರವದಿಂದ ಕಾಣಬೇಕು. ಯಾವುದೇ ಕಾರಣಕ್ಕೂ ಅವರ ಮೇಲೆ ಹಲ್ಲೆ ಮಾಡಬಾರದು. ಹೀಗೆ ಮೊದಲಾದ ವಿಷಯಗಳ ಕುರಿತಂತೆ ತಿಳಿಸಲಾಯಿತು.
ಬಂಜಾರ ಸರ್ಕಾರಿ, ಅರೆ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ.ಬಿ. ನಾಯಕ್, ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿ ಜಾಧವ್, ಪಿಡಿಒ ಹರಿಚಂದ ರಾಠೋಡ, ಪ್ರಭು ಜಾಧವ್, ರವಿ ನಾಯಕ್, ಸುಭಾಷ ರಾಠೋಡ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.