ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು 48 ಜನರಿಗೆ ಸೋಂಕು ತಗುಲಿ, 50 ವರ್ಷದ ರೋಗಿಯೊಬ್ಬ ಮೃತಪಟ್ಟಿದ್ದಾನೆ.
ಇಂದು ಮತ್ತೆ 48 ಮಂದಿಗೆ ಕೊರೊನಾ: ರಾಜ್ಯದಲ್ಲಿ ಮೊದಲ ಸ್ಥಾನ ಪಡೆದ ಕಲಬುರಗಿ! - corona
ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಬೆಂಬಿಡದೆ ಕಾಡುತ್ತಿದ್ದು, ಇಂದು ಸಹ 48 ಮಂದಿಗೆ ಸೋಂಕು ತಗುಲಿ ಆತಂಕ ಸೃಷ್ಟಿಸಿದೆ.
ಹೌದು, ಜಿಲ್ಲೆಯಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆ ಸೋಂಕಿತರ ಸಂಖ್ಯೆಯಲ್ಲಿ ರಾಜ್ಯದಲ್ಲಿ ಮೊದಲನೇ ಸ್ಥಾನಕ್ಕೇರಿದೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಜೂನ್ 13ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈತ ಕೊರೊನಾದಿಂದ ಮೃತಪಟ್ಟಿದ್ದಾನೆ ಎಂದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ಮತ್ತೆ 48 ಜನ ಸೋಂಕಿತರು ಪತ್ತೆಯಾಗಿದ್ದು, ಈ ಪೈಕಿ 19 ಮಕ್ಕಳು, 12 ಮಹಿಳೆಯರು, 17 ಪುರುಷರಿಗೆ ಕೊರೊನಾ ವಕ್ಕರಿಸಿದೆ. ಆರು ಜನರಿಗೆ ಸೋಂಕಿತರಿಂದ ಸೋಂಕು ಹರಡಿದರೆ, ಉಳಿದ 18 ಸೋಂಕಿತರು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇಂದಿನ ಸೋಂಕಿತರಲ್ಲಿ 24 ಜನರ ಟ್ರಾವೆಲ್ ಹಿಸ್ಟರಿ ದೊರೆಯದಿರುವುದು ಆತಂಕಕ್ಕೆ ಕಾರಣವಾಗಿದೆ.