ಕಲಬುರಗಿ:ಮೃತ 80 ವರ್ಷದ ವೃದ್ಧ ಸೇರಿದಂತೆ ಜಿಲ್ಲೆಯಲ್ಲಿ ಮತ್ತೆ ಮೂರು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದ್ದು, ನಿನ್ನೆ ಬೆಳಗ್ಗೆ ನಗರದ ನ್ಯಾಷನಲ್ ಚೌಕ್ ನಿವಾಸಿಯಾಗಿದ್ದ 80 ವರ್ಷದ ವೃದ್ಧ ಮೃತಪಟ್ಟಿದ್ದ.
ಕಲಬುರಗಿಯಲ್ಲಿ ಇಂದು ಮತ್ತೆ ಮೂರು ಜನರಿಗೆ ಕೊರೊನಾ ಪಾಸಿಟಿವ್ ದೃಢ! - ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು
ಕಲಬುರಗಿಯಲ್ಲಿ ಇಂದು ಮತ್ತೆ ಮೂರು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಇವರಲ್ಲಿ ನಾಲ್ವರು ಮೃತಪಟ್ಟರೆ ಮೂವರು ಗುಣಮುಖರಾಗಿದ್ದಾರೆ.
ಆ ವ್ಯಕ್ತಿಯ ವರದಿ ಕೊರೊನಾ ಪಾಸಿಟಿವ್ ಬಂದಿದೆ ಎಂದು ಇಂದು ಬೆಳಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ ಟ್ವೀಟ್ ಮಾಡಿದ್ದರು. ಇದೀಗ ಮೃತ ವೃದ್ಧ ಸೇರಿದಂತೆ ಒಟ್ಟು ಮೂವರಿಗೆ ಕೊರೊನಾ ಪಾಸಿಟಿವ್ ಇರುವುದು ಆರೋಗ್ಯ ಇಲಾಖೆಯ ವರದಿಯಲ್ಲಿ ದೃಢಪಟ್ಟಿದೆ.
ಮೃತ ವೃದ್ಧನಲ್ಲದೆ 29 ವರ್ಷದ ವ್ಯಕ್ತಿ ಹಾಗೂ 61ವರ್ಷದ ವೃದ್ಧನಿಗೆ ಕೊರೊನಾ ಸೋಂಕು ತಗುಲಿರುವದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದ್ದು, ಇವರಲ್ಲಿ ನಾಲ್ವರು ಮೃತಪಟ್ಟರೆ ಮೂವರು ಗುಣಮುಖರಾಗಿದ್ದಾರೆ. ಸದ್ಯ ಸೋಂಕಿತರನ್ನು ಇಎಸ್ಐ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.