ಕಲಬುರಗಿ: ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. 38 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ.
ಕಲಬುರಗಿಯಲ್ಲಿ ಮತ್ತೊಂದು ಕೊರೊನಾ ದೃಢ: ಸೋಂಕಿತರ ಸಂಖ್ಯೆ 72ಕ್ಕೆ ಏರಿಕೆ - isolation ward
ಕಲಬುರಗಿಯಲ್ಲಿ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಲೇ ಇದೆ. ಈ ನಡುವೆ ಸೋಂಕಿತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಕುರಿತು ಪತ್ತೆ ಹಚ್ಚಲಾಗುತ್ತಿದ್ದು, ಸೋಂಕಿತನಿಗೆ ಇಎಸ್ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
klb
ಸೋಂಕಿತ ವ್ಯಕ್ತಿ ನಗರದ ಇಸ್ಲಾಮಾಬಾದ್ ನಿವಾಸಿ ಎನ್ನಲಾಗುತ್ತಿದೆ. ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಕುರಿತು ಪತ್ತೆಹಚ್ಚಲಾಗುತ್ತಿದ್ದು, ಸೋಂಕಿತನಿಗೆ ಇಎಸ್ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 72ಕ್ಕೆ ಏರಿಕೆಯಾಗಿದ್ದು, ಇವರಲ್ಲಿ 44 ಜನರು ಗುಣಮುಖರಾಗಿದ್ದಾರೆ. ಆರು ಜನ ಮೃತಪಟ್ಟಿದ್ದಾರೆ.
Last Updated : May 11, 2020, 12:58 PM IST