ಕಲಬುರಗಿ: ಕೊರೊನಾದಿಂದ ಕಲಬುರಗಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಹಾಗೂ ಅವರಿಗೆ ಕೊರೊನಾ ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ
ಕೊರೊನಾಗೆ ವ್ಯಕ್ತಿ ಬಲಿ ಹಿನ್ನೆಲೆ: ಕಲಬುರಗಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ - Corona effect
ಗುರುವಾರ ಕೊರೊನಾ ವೈರೆಸ್ನಿಂದಾಗಿ ಓರ್ವ ವ್ಯಕ್ತಿ ಬಲಿಯಾದ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಕಲಬುರಗಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿ ರಜೆ ಘೋಷಣೆ ಮಾಡಲಾಗಿದೆ.
ಕೊರೊನಾಗೆ ವ್ಯಕ್ತಿ ಮೃತಪಟ್ಟ ಹಿನ್ನೆಲೆ ಕಲಬುರಗಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಕಲಬುರಗಿ ನಗರದಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಡಿಡಿಪಿಐ ಬಾಳಾಗಂಡಿ ಮಾಹಿತಿ ನೀಡಿದ್ದಾರೆ. ಪರೀಕ್ಷೆಗಳಿದ್ದರೆ ನಿಗದಿಯಂತೆ ಮುಂದುವರೆಸುವಂತೆ ಸೂಚಿಸಲಾಗಿದೆ. ಪರೀಕ್ಷೆ ಮುಗಿದ ನಂತ್ರ ಮತ್ತೆ ತರಗತಿ ನಡೆಸುವಂತಿಲ್ಲ, ಪರೀಕ್ಷೆ ಇಲ್ಲದ ತರಗತಿಗಳಿಗೆ ರಜೆ ಘೋಷಣೆ ಮಾಡಿ ಎಂದು ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಈ ಆದೇಶ ಹೋರಡಿಸುವುದಾಗಿ ಡಿಡಿಪಿಐ ಬಾಳಾಗಂಡಿ ತಿಳಿಸಿದ್ದಾರೆ.
ಕೊರೊನಾ ಭೀತಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿರುವುದಾಗಿ ಅಧಿಕೃತ ಮಾಹಿತಿ ನೀಡಿದ್ದಾರೆ.