ಕಲಬುರಗಿ:ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಮಾಲೀಕಯ್ಯ ಗುತ್ತೇದಾರ್ಗೆ ಕೊರೊನಾ - ಕಲಬುರಗಿ ಸುದ್ದಿ
ತಮ್ಮ ಫೇಸ್‌ಬುಕ್, ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ತಪಾಸಣೆಗೆ ಒಳಗಾದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿದ್ದೇನೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಫೇಸ್‌ಬುಕ್, ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ತಪಾಸಣೆಗೆ ಒಳಗಾದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿ ಇರುವಾಗ ಮಾಲೀಕಯ್ಯ ಗುತ್ತೇದಾರ್ ನೇರ ಸಂಪರ್ಕಕ್ಕೆ ಬಂದಿದ್ದರು. ಕಟೀಲ್ ಅವರಿಗೆ ಮೂರು ದಿನಗಳ ಹಿಂದಷ್ಟೇ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಇದೀಗ ಮಾಲೀಕಯ್ಯ ಗುತ್ತೇದಾರ್ಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದು ಸ್ಥಳೀಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಆತಂಕ ಮೂಡಿಸಿದೆ.