ಕಲಬುರಗಿ: ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ತನ್ನ ರಣಕೇಕೆ ಮುಂದುವರೆಸಿದ್ದು, ಮತ್ತೆ 69 ಜನರಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ 23 ಮಕ್ಕಳು, 18 ಮಹಿಳೆಯರು, 28 ಪುರುಷರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿಗೆ ತುತ್ತಾದ ಎಲ್ಲರೂ ಮಹಾರಾಷ್ಟ್ರದಿಂದ ಮರಳಿದ ವಲಸಿಗರಾಗಿದ್ದಾರೆ.
ಕಲಬುರಗಿಯಲ್ಲಿ ಕೊರೊನಾರ್ಭಟ: ಒಂದೇ ದಿನ 23 ಮಕ್ಕಳೂ ಸೇರಿ 69 ಜನರಿಗೆ ತಗುಲಿದ ಸೋಂಕು - Corona Latest News
ರಾಜ್ಯದಲ್ಲಿಂದೂ ಸಹ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಕಲಬುರಗಿಯಲ್ಲಿ ಒಟ್ಟು 69 ಹೊಸ ಪ್ರಕರಣ ದಾಖಲಾಗಿದ್ದು, ಇದರಲ್ಲಿ 23 ಮಕ್ಕಳು ಇರುವುದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ ಎಲ್ಲರೂ ಸಹ ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದರು ಎನ್ನಲಾಗಿದೆ.
ಕಲಬುರಗಿಯಲ್ಲಿ ಕೊರೊನಾರ್ಭಟ: ಒಂದೇ ದಿನ 23 ಮಕ್ಕಳೂ ಸೇರಿ 69 ಜನರಿಗೆ ಅಂಟಿದ ಪೀಡೆ
ಸೋಂಕಿತರೆಲ್ಲರನ್ನೂ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಸದ್ಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 621ಕ್ಕೆ ಏರಿಕೆಯಾಗಿದೆ. ಇಂದು 38 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯವರಗೆ ಒಟ್ಟು 166 ಜನ ಕೊರೊನಾದಿಂದ ಗುಣಮುಖರಾಗಿದ್ದು, 7 ಜನ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ 448 ಸಕ್ರಿಯ ಪ್ರಕರಣಗಳಿವೆ.