ಕಲಬುರಗಿ:ಜಿಮ್ಸ್ ಆಸ್ಪತ್ರೆ ಶೌಚಾಲಯದಲ್ಲಿ ಕಾಲು ಜಾರಿ ಬಿದ್ದು ಕೊರೊನಾ ಸೋಂಕಿತ ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ನಗರದ ನಿವಾಸಿ ಬಸವರಾಜ್ ಹಿರೇಮಠ್ (42) ಮೃತ ದುರ್ದೈವಿ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಶೌಚಾಲಯಕ್ಕೆ ಹೋಗಿದ್ದ ಬಸವರಾಜ್ ಕಾಲು ಜಾರಿ ಬಿದ್ದು ಒದ್ದಾಡುತ್ತಿದ್ದರು.

ವ್ಯಕ್ತಿ ಕಾಲು ಜಾರಿ ಬಿದ್ದು ಎರಡ್ಮೂರು ಗಂಟೆಗಳಾದರೂ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ ಗಮನಿಸಿಲ್ಲ. ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಬಸವರಾಜ ಮೃತಪಟ್ಟಿದ್ದಾನೆಂದು ಮೃತನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಸವರಾಜ ಗುಣಮುಖನಾಗಿ ಇಷ್ಟರಲ್ಲೇ ಬಿಡುಗಡೆಯಾಗಬೇಕಾಗಿತ್ತು. ಆದರೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.