ಕಲಬುರಗಿ: ಜಿಲ್ಲೆಯಲ್ಲಿಂದು ಒಂದೇ ದಿನ ಬರೋಬ್ಬರಿ 631 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಎದುರಾಗಿದೆ.
ಕಲಬುರಗಿಯಲ್ಲಿಂದು 631 ಮಂದಿಗೆ ಕೊರೊನಾ ದೃಢ... ಇಬ್ಬರು ಸಾವು - kalburagi corona death
ಕಲಬುರಗಿ ಜಿಲ್ಲೆಯಲ್ಲಿಂದು ಒಂದೇ ದಿನ ಬರೋಬ್ಬರಿ 631 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದರೆ, ಇಬ್ಬರು ಸಾವನ್ನಪ್ಪಿದ್ದಾರೆ.
ಕಲಬುರಗಿಯಲ್ಲಿಂದು ಬರೋಬ್ಬರಿ 631 ಮಂದಿಗೆ ಕೊರೊನಾ..ಇಬ್ಬರು ಸಾವು
ಈ ಮೂಲಕ ಸೋಂಕಿತರ ಸಂಖ್ಯೆ 4,495 ಕ್ಕೆ ಏರಿಕೆಯಾಗಿದ್ದು, ಇಂದು ಮತ್ತಿಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ.
ಇಂದು 23 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇಲ್ಲಿವರೆಗೆ 2,271 ಮಂದಿ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ. ಸದ್ಯ, 2,158 ಸಕ್ರಿಯ ಪ್ರಕರಣಗಳಿವೆ.