ಕಲಬುರಗಿ:ಕೊರೊನಾ ಸೋಂಕಿನಿಂದ ಕಲಬುರಗಿ ನಗರದ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 188ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಕಲಬುರಗಿಯಲ್ಲಿ ಸೋಂಕಿಗೆ ಇಬ್ಬರು ಬಲಿ:10 ಸಾವಿರದ ಸಮೀಪಕ್ಕೆ ಸೋಂಕಿತರ ಸಂಖ್ಯೆ - ಕೊರೊನಾ
ಕಲಬುರಗಿ ಜಿಲ್ಲೆಯಲ್ಲಿ ಇಂದು ಕೊರೊನಾಗೆ ಮತ್ತಿಬ್ಬರು ಬಲಿಯಾಗಿದ್ದು, ಇಂದು 165 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಕಲಬುರಗಿ ನಗರದ ಜಾಂಗೆ ಲೇಔಟ್ ಪ್ರದೇಶದ 75 ವರ್ಷದ ವೃದ್ಧ (P-213062) ಆ.11 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಆ.16 ರಂದು ನಿಧನ ಹೊಂದಿದ್ದಾರೆ. ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಜೊತೆಗೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಕರುಣೇಶ್ವರ ನಗರದ 45 ವರ್ಷದ ಪುರುಷ (P-260519) ಆ.19 ರಂದು ಆಸ್ಪತ್ರೆಗೆ ದಾಖಲಾಗಿ ಅಂದೇ ಸಾವನ್ನಪ್ಪಿದಾನೆ.
10 ಸಾವಿರ ಸಮೀಪಿಸಿದ ಸೋಂಕಿತರ ಸಂಖ್ಯೆ:
ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದ್ದು ಸೋಂಕಿತರ ಸಂಖ್ಯೆ 10 ಸಾವಿರ ಸಮೀಪಿಸಿದೆ. ಇಂದು 165 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9939 ಕ್ಕೆ ಏರಿಕೆಯಾಗಿದೆ. ಇಂದು 198 ಜನ ಸೋಂಕಿತರು ಡಿಸ್ಚಾರ್ಜ್ ಆಗಿದ್ದು, ಡಿಸ್ಚಾರ್ಜ್ ಆದವರ ಸಂಖ್ಯೆ 7,913 ಗೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸದ್ಯ 1838 ಆ್ಯಕ್ಟಿವ್ ಕೇಸ್ಗಳಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.