ಕಲಬುರಗಿ: ರಸ್ತೆ ಅಪಘಾತದಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಕೆಲ್ಲೂರು ಗ್ರಾಮದ ಬಳಿ ನಡೆದಿದೆ.
ಜೇವರ್ಗಿಯಲ್ಲಿ ಬೈಕ್ ಅಪಘಾತ: ಕೊರೊನಾ ವಾರಿಯರ್ ಸಾವು - kalburgi corona warrier news
ಕಲಬುರಗಿಯ ಜೇವರ್ಗಿ ತಾಲೂಕಿನ ಕೆಲ್ಲೂರು ಗ್ರಾಮದ ಬಳಿ ಬೈಕ್ ಅಪಘಾತವಾಗಿ ಆಶಾ ಕಾರ್ಯಕರ್ತೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಕೊರೊನಾ ವಾರಿಯರ್ ಸಾವು
ಶಾರದಾ (41) ಮೃತ ಆಶಾ ಕಾರ್ಯಕರ್ತೆ. ಇವರು ಸಭೆಯಲ್ಲಿ ಪಾಲ್ಗೊಳ್ಳುವ ಹಿನ್ನೆಲೆ ಜೇವರ್ಗಿ ಟಿಹೆಚ್ಒ ಕಚೇರಿಗೆ ಬರುವಾಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರು 12 ವರ್ಷಗಳಿಂದ ಮಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದರು.