ಕಲಬುರಗಿ: ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ.
ಕಲಬುರಗಿಯಲ್ಲಿ ಮತ್ತೆ ಕೊರೊನಾ ಸೋಂಕು ಪತ್ತೆ: ಸೋಂಕಿತರ ಸಂಖ್ಯೆ 12 - Coronavirus Infected number rises to 12
ಕಲಬುರಗಿಯಲ್ಲಿ ಇದೇ ಏಪ್ರಿಲ್ 7 ರಂದು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ವೃದ್ಧನ 24 ವರ್ಷದ ಸೊಸೆಗೆ ಕೊರೊನಾ ಸೋಂಕು ತಗುಲಿರುವುದು ದೃಢ ಪಟ್ಟಿದೆ.

ಕೊರೊನಾ ಸೋಂಕು ಪತ್ತೆ
ಇದೇ ಏಪ್ರಿಲ್ 7 ರಂದು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ವೃದ್ಧನ 24 ವರ್ಷದ ಸೊಸೆಗೆ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಇದೇ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 38 ವರ್ಷದ ಆಯಾಗೂ ಕೊರೊನಾ ಇರುವುದನ್ನು ಡಿಸಿಎಂ ಕಾರಜೋಳ ತಿಳಿಸಿದ್ದರು.
ಸದ್ಯ ಸೋಂಕಿತರಿಬ್ಬರಿಗೂ ಕಲಬುರಗಿ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.