ಕಲಬುರಗಿ: ಜಿಲ್ಲೆಯಲ್ಲಿ ನಿನ್ನೆ ಒಂದು ವರ್ಷದ ಮಗುವಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿರುವ ಹಿನ್ನಲೆ ತಾಲೂಕಿನ ಕವಲಗಾ ಕೆ. ಹಾಗೂ ಸರಡಗಿ ಗ್ರಾಮಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಕಲಬುರಗಿಯ ಗ್ರಾಮೀಣ ಪ್ರದೇಶಕ್ಕೂ ವಕ್ಕರಿಸಿದ ಮಹಾಮಾರಿ... ಎರಡು ಹಳ್ಳಿಗಳು ಸಂಪೂರ್ಣ ಲಾಕ್ಡೌನ್
ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ ಮಗುವಿನಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡ ಹಿನ್ನಲೆ ಎರಡು ಗ್ರಾಮಗಳನ್ನು ಸಂಪೂರ್ಣ ಲಾಕ್ಡೌನ್ ಮಾಡಲಾಗಿದೆ.
ಕಲಬುರಗಿಯಲ್ಲಿ ಕೊರೊನಾ ಸೋಂಕು
ನಿನ್ನೆಯಿಂದಲೇ ಪೊಲೀಸರು ಈ ಗ್ರಾಮಗಳಲ್ಲಿ ಬೀಡುಬಿಟ್ಟಿದ್ದು, ಸಂಪೂರ್ಣ ಲಾಕ್ಡೌನ್ ಮಾಡಲಾಗಿದೆ. ಗ್ರಾಮದ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಸೋಂಕಿತ ಮಗುವಿನ ಪೋಷಕರು, ಸಂಬಂಧಿಕರು ಸೇರಿ ಹಲವರ ಮೇಲೆ ಜಿಲ್ಲಾಡಳಿತ ನಿಗಾ ಇಟ್ಟಿದೆ.
ಕೆಲವರನ್ನು ಗುರುತಿಸಿ ಐಸೋಲೇಷನ್ನಲ್ಲಿ ಇಡಲಾಗಿದೆ. ಮಗುವಿಗೆ ಕೊರೊನಾ ಸೋಂಕು ತಗುಲಲು ಕಾರಣ ಏನು ಎಂಬುದರ ಕುರಿತು ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.