ಕರ್ನಾಟಕ

karnataka

ETV Bharat / state

ಕಲಬುರಗಿ ಶಾಸಕ ಬಸವರಾಜ ಮತ್ತಿಮೂಡಗೆ ಕೊರೊನಾ - Kalburgi corona latest news

ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ್​ಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರೀಗ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Basavaraja Mathimuda
Basavaraja Mathimuda

By

Published : Jul 30, 2020, 1:22 PM IST

ಕಲಬುರಗಿ:ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ್​​ಗೆ ಕೊರೊನಾ ಸೋಂಕು ತಗುಲಿದ್ದು, ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಾನು ಆರೋಗ್ಯವಾಗಿದ್ದು, ಸೋಂಕಿನ ಕೆಲವೊಂದು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ತನ್ನ ಜೊತೆ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್​​ಗೆ ಒಳಗಾಗುವಂತೆ ಕಾರ್ಯಕರ್ತರು, ಬೆಂಬಲಿಗರಲ್ಲಿ ಶಾಸಕರು ಮನವಿ ಮಾಡಿದ್ದಾರೆ.

ನಿಮ್ಮೆಲ್ಲರ ಆಶೀರ್ವಾದದಿಂದ ಶೀಘ್ರವೇ ಗುಣಮುಖನಾಗಿ ಮತ್ತೆ ನಿಮ್ಮೆ ಸೇವೆಗೆ ಬರಲಿದ್ದೇನೆ ಎಂದಿದ್ದಾರೆ.

ಇತ್ತೀಚೆಗಷ್ಟೆ ಸೋಂಕಿತ ವ್ಯಕ್ತಿಯೋರ್ವನ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಶಾಸಕರು ಕ್ವಾರಂಟೈನ್ ಆಗಿದ್ದರು. ಆದರೆ ಅವರಿಗೆ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details