ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಗ್ರಾಮದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ಕಲಬುರಗಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ - ಅನುಮಾನಾಸ್ಪದವಾಗಿ ಯುವಕನ ಶವ ಪತ್ತೆ
ಅನುಮಾನಾಸ್ಪದವಾಗಿ ಯುವಕನ ಶವ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಸಿದ್ಧರಾಮ ಜಗಶೆಟ್ಟಿ ಶವವಾಗಿ ಪತ್ತೆಯಾದ ಯುವಕ. ನಿನ್ನೆ ರಾತ್ರಿ ಜಮೀನಿಗೆ ಹೋಗಿ ಬರುವೆನೆಂದು ಹೇಳಿ ಹೋದಾತ ಇಂದು ಗ್ರಾಮದ ಹೊರವಲಯದಲ್ಲಿರುವ ಕೆಇಬಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ಮೃತನ ಕೈಯಲ್ಲಿದ್ದ ಚಿನ್ನದ ಎರಡು ಉಂಗುರ ಹಾಗೂ ಮೊಬೈಲ್ ನಾಪತ್ತೆಯಾಗಿದೆ. ಮೇಲ್ನೋಟಕ್ಕೆ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನಾಭರಣ ದೋಚಿಕೊಂಡು ಹೋಗಿರುವಂತೆ ಶವ ಪತ್ತೆಯಾಗಿದೆ.
ಇನ್ನು ಮೃತನ ಅಕ್ಕನ ಮಗ ನಿನ್ನೆ ರಾತ್ರಿಯಿಂದ ನಾಪತ್ತೆಯಾಗಿದ್ದು, ಆತನೇ ದುಷ್ಕೃತ್ಯ ಎಸಗಿ ಪರಾರಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.