ಕಲಬುರಗಿ:ಪಿಎಸ್ಐ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪಿಗೆ ಇದೇ ಮೊದಲ ಬಾರಿಗೆ ಕಲಬುರಗಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಪಿಎಸ್ಐ ನೇಮಕಾತಿ ಅಕ್ರಮದ ಕಿಂಗ್ಪಿನ್ ದಿವ್ಯಾ ಹಾಗರಗಿಗೆ ರಕ್ಷಣೆ ನೀಡಿ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಡಿ ಸುರೇಶ್ ಕಾಟೆಗಾಂವ್ ಎಂಬಾತನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಜಾಮೀನಿಗಾಗಿ ಈತ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕಲಬುರಗಿ ಹೈಕೋರ್ಟ್ ಪೀಠ ಜಾಮೀನು ಮಂಜೂರು ಮಾಡಿತು.